ಕಾರ್ಕಳ: ನಗರದ ಶ್ರೀ ವೆಂಕಟರಮಣ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಉದ್ಘಾಟನಾ ಸಮಾರಂಭವು ನಡೆಯಿತು.
ಡಾ| ದಿಶಾ ದಿವಾಕರ್ (ಆಡಳಿತ ವೈದ್ಯಾಧಿಕಾರಿ, ಪ್ರಾಥವಿಕ ಆರೋಗ್ಯ ಕೇಂದ್ರ ಮಾಳ) ಅವರು ದೀಪ ಬೆಳಗಿಸಿ ಉದ್ಘಾಟಿಸಿ, ಅಂಗಾಂಗ ದಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕೆ. ಸುಶೀಲಾ (ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಕಾರ್ಕಳ) ಅವರು ಹೆ.ಎನ್. ರೋಗದ ಕುರಿತು ಮಾಹಿತಿಯನ್ನು ನೀಡಿ, ಈ ರೋಗ ಬರದಂತೆ ತೆಗೆದುಕೊಳ್ಳಬಹುದಾದ ಮುನ್ನಚ್ಚರಿಕೆಯ ಬಗ್ಗೆ ಮಾಹಿತಿ ನೀಡಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ಗೀತಾ ಜಿ. ಯವರು ವಹಿಸಿದ್ದರು.
ರಾಷ್ಟ್ರೀಯ ಸೇವಾ ಯೋಜನೆಯ ನಾಯಕಿಯರಾದ ರಮ್ಯ, ಪ್ರೀತಿ, ನಿಶಾ, ಮುನೀರಾ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಪೂಜಾ ಕಾರ್ಯಕ್ರಮ ನಿರೂಪಿಸಿದರು. ಮುನೀರಾ ವಂದಿಸಿದರು.















































































