ಕಸ್ತೂರಿ ರಂಗನ್ ‌ವರದಿ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ತೀರ್ಮಾನ: ಸಿಎಂ ಡಿ ಕೆ ಶಿವಕುಮಾರ್

ಜನರ ಅಭಿಪ್ರಾಯ, ಭಾವನೆಗಳೇ ಸರ್ಕಾರದ ತೀರ್ಮಾನ ಆಗಿರಲಿದೆ ಎಂದು ಭರವಸೆ ನೀಡಿದ ಮುಖ್ಯಮಂತ್ರಿ

ಹೆಬ್ರಿ: ಕಸ್ತೂರಿ ರಂಗನ್ ‌ವರದಿಯ ಕಾರಣದಿಂದ ಆತಂಕಕ್ಕೆ ಒಳಗಾಗಿದ್ದ ಹೆಬ್ರಿ ಮತ್ತು ಸುತ್ತಮುತ್ತಲಿನ ಜನರಿಗೆ ಸಿ ಎಂ ಡಿ ಕೆ ಶಿವಕುಮಾರ್ ಅವರು ಉತ್ತರಿಸಿದ್ದಾರೆ.

ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ‌ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದ ಹಾಗೆ ಭೌತಿಕ ಸಮೀಕ್ಷೆ ನಡೆಸಲು ಸಂಘಟನೆಗಳು, ಜನಪ್ರತಿನಿಧಿಗಳು ನೀಡಿರುವ ಸಲಹೆಗಳ ಬಗ್ಗೆ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಾಗುವುದು. ಆ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸೆ. 27 ರ ಒಳಗಾಗಿ ಕಸ್ತೂರಿ ರಂಗನ್ ವರದಿಯ ಬಗ್ಗೆ ಕೇಂದ್ರ ಸರ್ಕಾರಕ್ಕೆ ನಾವು ಕರ್ನಾಟಕದ ನಿಲುವನ್ನು ತಿಳಿಸಬೇಕಾಗಿದೆ. ಈ ಸಂಬಂಧ ಮುಂದಿನ ಮೂರು ದಿನಗಳ ವಿಶೇಷ ಅಧಿವೇಶನದ ಮೊದಲ ದಿನದಲ್ಲೇ ಈ ಬಗ್ಗೆ ಚರ್ಚೆ ನಡೆಸುವ ಭರವಸೆ ನೀಡಿದ್ದಾರೆ. ಹಾಗೆಯೇ ಸರ್ಕಾರದ ತೀರ್ಮಾನ ಜನರ ಭಾವನೆ, ಅಭಿಪ್ರಾಯವೇ ಆಗಿರಲಿದೆ ಎಂದು ಭರವಸೆ ನೀಡಿದ್ದಾರೆ.

ಅರಣ್ಯ ಹಕ್ಕು ಕಾಯ್ದೆಯಲ್ಲಿ ‌ತಿದ್ದುಪಡಿ ವಿಚಾರವಾಗಿಯೂ ಮಾತನಾಡಿರುವ ‌ಸಿಎಂ, ಈಗ ಅರಿವು ಅರಣ್ಯ ಹಕ್ಕು ಕಾಯ್ದೆಯ ನಿಯಮಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಎಲ್ಲರಿಗೂ 25 ವರ್ಷಗಳ ಕಾಲಮಿತಿ ನಿಗದಿ ಮಾಡುವ ಸಂಬಂಧ ಕೇಂದ್ರ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಅರಣ್ಯ ಪ್ರದೇಶದಲ್ಲಿ ವಾಸಿಸುವ ಅವರು, ಕೃಷಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಮ್ಮ ಸರ್ಕಾರವೇ ಬಗರ್ ಹುಕುಂ ಮತ್ತು ಉಳುವವನೇ ಹೊಲದೊಡೆಯ ಎಂಬ ನೀತಿಗಳನ್ನು ಜಾರಿಗೆ ತಂದಿರುವುದು ಎಂದು ಈ ಸಂದರ್ಭದಲ್ಲಿ ನೆನಪಿಸಿದ್ದಾರೆ.

ತುಳುನಾಡಿನ ಜನ ದೇಶದ ಆಸ್ತಿ ಎಂದು ಸಿಎಂ ಹೇಳಿದ್ದು, ಮಾತೃಭಾಷೆ ತುಳುವನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 2ನೇ ಅಧಿಕೃತ ಭಾಷೆಯಾಗಿ ಘೋಷಿಸಲು ಮಂಗಳೂರಿನಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು. ಹಾಗೆಯೇ ಸಂಪುಟ ಸಭೆಯಲ್ಲಿ ಕೈಗೊಂಡ 60 ತೀರ್ಮಾನಗಳಲ್ಲಿ 40 ತೀರ್ಮಾನಗಳು ಕರಾವಳಿ ಭಾಗದ ಅಭಿವೃದ್ಧಿಯ ಆಶಯವನ್ನೇ ಒಳಗೊಂಡಿರುವುದಾಗಿ ತಿಳಿಸಿದ್ದಾರೆ.





















































































































































error: Content is protected !!
Scroll to Top