ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಗಳು ರೀಲ್ಸ್ ಮಾಡುವಂತಿಲ್ಲ ಎಂದು ಆದೇಶ ಹೊರಡಿಸಿದ ಕರ್ನಾಟಕ ಸರ್ಕಾರ

ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳು ಪ್ರವಾಸದ ಸಂದರ್ಭದಲ್ಲಿ ಅನುಸರಿಸಲೇಬೇಕಾದ ‌ಮಹತ್ವದ ಕಟ್ಟುನಿಟ್ಟಿನ ನಿಯಮವೊಂದನ್ನು ‌ರಾಜ್ಯದ ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿದೆ.

ಶೈಕ್ಷಣಿಕ ಪ್ರವಾಸದ ಸಮಯದಲ್ಲಿ ವಿದ್ಯಾರ್ಥಿಗಳು ಸೆಲ್ಫಿ ವಿಡಿಯೋ, ರೀಲ್ಸ್‌ಗಳನ್ನು ಮಾಡುವಂತಿಲ್ಲ. ಮೊಬೈಲ್ ಚಿತ್ರೀಕರಣದಿಂದ ಅವಘಡಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸರ್ಕಾರ ಈ ಮಹತ್ವದ ಆದೇಶ ಹೊರಡಿಸಿರುವುದಾಗಿದೆ. ಶೈಕ್ಷಣಿಕ ಪ್ರವಾಸದ ವೇಳೆ ಮೊಬೈಲ್ ರೀಲ್ಸ್ ಮಾಡುವುದನ್ನು ಬ್ಯಾನ್ ಮಾಡಿ ಸರ್ಕಾರ ಆದೇಶ ಹೊರಡಿಸಿರುವುದಾಗಿದೆ.

ಹಾಗೆಯೇ ಶೈಕ್ಷಣಿಕ ಪ್ರವಾಸಗಳಿಗೆ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಯವಾಗಿದೆ. ಯಾವ ಪ್ರದೇಶಕ್ಕೆ, ಯಾವ ತಾಣಕ್ಕೆ ಪ್ರವಾಸ ಎನ್ನುವ ಕುರಿತು ವಿವರಣೆ ನೀಡಬೇಕು. ಜೊತೆಗೆ ವಿದ್ಯಾರ್ಥಿಗಳು, ಸಿಬ್ಬಂದಿಗಳು, ವಾಹನ ಸೇರಿದಂತೆ ಎಲ್ಲಾ ಮಾಹಿತಿಯನ್ನು ನೀಡಬೇಕು. ಪ್ರಮುಖವಾಗಿ ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಗಳ ಸೆಲ್ಫಿ ವಿಡಿಯೋ, ರೀಲ್ಸ್ ವಿಡಿಯೋಗಳನ್ನು, ಸೇರಿದಂತೆ ಚೀತ್ರೀಕರಣ ಮಾಡುವುದು ನಿಷೇಧಿಸಲಾಗಿದೆ. ಈ ಬಗ್ಗೆ ಶಿಕ್ಷಕರು ನಿಗಾ ವಹಿಸಿವಂತೆಯೂ ಸೂಚಿಸಲಾಗಿದೆ.

ಕಾಲೇಜು ಶಿಕ್ಷಣ ಇಲಾಖೆ ನೀಡಿರುವ ಆದೇಶದ ಉಲ್ಲಂಘನೆಯಾದರೆ ಕ್ರಮ ಕೈಗೊಳ್ಳಲಾಗುತ್ತದೆ. ವಿದ್ಯಾರ್ಥಿಗಳ ಸುರಕ್ಷತೆ, ಶಿಸ್ತು ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಆದೇಶ ಪಾಲನೆ ಅತ್ಯಗತ್ಯ ಎಂದು ಸುತ್ತೋಲೆಯಲ್ಲಿ ಸೂಚಿಸಿದೆ.





















































































































































error: Content is protected !!
Scroll to Top