ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇವರ ವತಿಯಿಂದ ಸರಕಾರಿ ಪದವಿಪೂರ್ವ ಕಾಲೇಜು ಬೆಳ್ಮಣ್ ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪದವಿಪೂರ್ವ ಬಾಲಕರ ವಿಭಾಗದ ಮತ್ತು ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕಿಯರ ವಿಭಾಗದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ದೀಪ್ತಿ ಶೆಟ್ಟಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾದರೆ, ಬಾಲಕರ ವಿಭಾಗದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಶೇಕ್ ಇಮಾದ್, ಪ್ರಥಮ ವಾಣಿಜ್ಯ ವಿಭಾಗದ ಗಗನ್ ಶೆಟ್ಟಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.











































































