ನಾಡಹಬ್ಬ ದಸರಾ ಹಿನ್ನೆಲೆ ಶಾಲೆಗಳಿಗೆ ಇಪ್ಪತ್ತು ದಿನಗಳ ರಜೆ ಘೋಷಿಸಿದ ಕರ್ನಾಟಕ ಸರ್ಕಾರ

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ನಾಡಹಬ್ಬ ದಸರಾದ ಸಂಭ್ರಮ ರಾಜ್ಯದಲ್ಲಿ ಆರಂಭವಾಗಲಿದ್ದು, ಈ ಹಿನ್ನೆಲೆ ದಸರಾ ಪ್ರಯುಕ್ತ ಶಾಲಾ ಶಿಕ್ಷಣ ಇಲಾಖೆಯು ಸುಧೀರ್ಘ ರಜೆ ಘೋಷಿಸಿ ಆದೇಶ ಹೊರಡಿಸಿದೆ.

ಅ. 3 ರಿಂದ ಅ. 22 ರ ವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಅ.23 ರಂದು ಶಾಲೆಗಳು ಮತ್ತೆ ಆರಂಭವಾಗಲಿವೆ. ರಜಾ ಅವಧಿಯು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಕಡ್ಡಾಯವಾಗಿ ಅನ್ವಯಿಸಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ರಈ ಬಾರಿಯ ದಸರಾವನ್ನು ರಾಜ್ಯ ಸರ್ಕಾರವು ಸ್ಮರಣೀಯವಾಗಿ ಆಚರಿಸಲು ನಿರ್ಧರಿಸಿದೆ. ದಕ್ಷಿಣ ಭಾರತದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲು ತೀರ್ಮಾನಿಸಿದೆ. ಹಬ್ಬದ ಪ್ರಮುಖ ಆಕರ್ಷಣೆಯಾಗಿ ಬೃಹತ್ ಡ್ರೋನ್ ಹಾಗೂ ಏರ್ ಷೋ ಆಯೋಜಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ. ದಸರಾದ ಸುದೀರ್ಘ ಇತಿಹಾಸ ಹಾಗೂ ರಾಜಪರಂಪರೆಯನ್ನು ಡಿಜಿಟಲ್ ಮಾಧ್ಯಮಗಳ ಮೂಲಕ ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಿಸಲು ಮೈಸೂರು ಜಿಲ್ಲಾಡಳಿತ ವಿಶೇಷ ಯೋಜನೆಗೆ ಚಾಲನೆ ನೀಡಿದೆ ಎಂದು ತಿಳಿದು ಬಂದಿದೆ.















































error: Content is protected !!
Scroll to Top