ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ: ಧರ್ಮಸ್ಥಳದ‌ ಸೌಜನ್ಯ ಕೊಲೆ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಮರು ತನಿಖೆಗೆ ಆದೇಶ ನೀಡಿರುವ ಸುಪ್ರೀಂ ಕೋರ್ಟ್, ಇದಕ್ಕಾಗಿ ಮೂರು ತಿಂಗಳುಗಳ ಕಾಲಾವಕಾಶ ನೀಡಿದೆ.

ಸಿಬಿಐ ಈ ಪ್ರಕರಣದ ತನಿಖೆಯನ್ನು ‌ನಡೆಸಿ, ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಆ ಬಳಿಕ ಮೃತ ಸೌಜನ್ಯಳ ತಾಯಿ ಕುಸುಮಾವತಿ ಅವರು ಪ್ರಕರಣದ ಮರುತನಿಖೆ ‌ನಡೆಸುವಂತೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಹೈಕೋರ್ಟ್ ಅವರ ಮನವಿ ಅರ್ಜಿಯನ್ನು ವಜಾ ಮಾಡಿ ಆದೇಶ ಹೊರಡಿಸಿತ್ತು. ಅದಾದ ಬಳಿಕ ಕುಸುಮಾವತಿ ‌ಈ ಪ್ರಕರಣದ ಮರುತನಿಖೆಯ ಮನವಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದರು.

ಈ ಪ್ರಕರಣದಲ್ಲಿ ಪರಾವಲಂಬಿ, ಕಳಪೆ ತನಿಖೆ ನಡೆಸಲಾಗಿದೆ ಎಂದು ಕೋರ್ಟ್ ಈ ಹಿಂದೆ ಸಿಬಿಐ‌ಯನ್ನು ತರಾಟೆಗೆ ತೆಗೆದುಕೊಂಡಿತ್ತು. ಪ್ರಕರಣದ ತೀರ್ಪನ್ನು ಕಾಯ್ದಿರಿಸಲಾಗಿತ್ತು.

ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್ ಮತ್ತು ಸಂಜೀವ್ ಸಚ್‌ದೇವ್ ಅವರಿದ್ದ ಪೀಠ, ಈ ಪ್ರಕರಣದಲ್ಲಿ ಸಿಬಿಐನ ತನಿಖಾ ಅಧಿಕಾರಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದ ಹಿಂದಿನ ಎಲ್ಲಾ ಸಾಕ್ಷ್ಯಗಳನ್ನು ಪರಿಶೀಲಿಸಿ ಅವರು ವರದಿ ನೀಡಿರುವುದಾಗಿದೆ. ಯಾವುದೇ ರೀತಿಯ ಸ್ವತಂತ್ರ ತನಿಖೆ ನಡೆದಿಲ್ಲ ಎಂದು ಹೇಳಿದೆ. ಇದು ಸಿಬಿಐ‌ನ ಕೆಟ್ಟ ಕಾರ್ಯವೈಖರಿಯ ಪ್ರತಿಬಿಂಬ ಎಂದು ಹೇಳಿರುವ ಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು.















































error: Content is protected !!
Scroll to Top