ವಡೋದರಾ: 72 ನೇ ಆವೃತ್ತಿಯ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇಂದು ಗುಜರಾತ್‌ನಲ್ಲಿ ನಡೆಯಲಿದೆ.
ಗುಜರಾತ್‌ನ ಏಕತಾನಗರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿಗಳನ್ನು ಪ್ರದಾನಿಸಲಿದ್ದಾರೆ. 2024 ನೇ ಸಾಲಿನಲ್ಲಿ ತೆರೆಕಂಡ ಭಾರತೀಯ ಚಿತ್ರಗಳಿಗೆ ಸಂಬಂಧಿಸಿದ ಹಾಗೆ ಈ ಬಾರಿ ಪ್ರಶಸ್ತಿ ಪ್ರದಾನಿಸಲಾಗುತ್ತಿದೆ.
ಈ ಬಾರಿಯ ದೇಶದ ಅತ್ಯುನ್ನತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಕನ್ನಡದ ಹೆಸರಾಂತ ಹಿರಿಯ ನಟ ಅನಂತ್‌ನಾಗ್ ಅವರ ಮುಡಿಗೇರಿದ್ದು, ಈ ಕಾರ್ಯಕ್ರಮದಲ್ಲಿ ಅವರು ಪ್ರಶಸ್ತಿಯನ್ನು ರಾಷ್ಟ್ರಪತಿಗಳಿಂದ ಪಡೆದುಕೊಳ್ಳಲಿದ್ದಾರೆ. ಕನ್ನಡದ ಅತ್ಯುತ್ತಮ ಚಿತ್ರ ವಿಭಾಗದಲ್ಲಿ ‘ಮಿಥ್ಯ’, ಅತ್ಯುತ್ತಮ ಪೋಷಕ ನಟಿಯಾಗಿ ಮಿಥ್ಯ ಚಿತ್ರದ ರೂಪಶ್ರೀ ವರ್ಕಾಡಿ, ಅತ್ಯುತ್ತಮ ಬಾಲನಟ ಅತೀಶ್ ಶೆಟ್ಟಿ, ಅತ್ಯುತ್ತಮ ಸಿನಿಮಾ ಆಧಾರಿತ ಪುಸ್ತಕ ‘ನಾನಿರುವುದೇ ನಿಮಗಾಗಿ ನಾಡಿರುವುದೇ ನನಗಾಗಿ: ಕನ್ನಡ ಸಿನಿಮಾದ ತತ್ವ ಮತ್ತು ರಾಜಕೀಯ’ಗಳು ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿರುವುದಾಗಿದೆ.





















