ಕಚೇರಿಯಲ್ಲಿ ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಕಾರ್ಕಳ ತಹಶೀಲ್ದಾರ್ ಪ್ರದೀಪ್ ಆರ್. ವಿರುದ್ಧ ಜಿಲ್ಲಾಧಿಕಾರಿಗೆ ದೂರು

ಕಾರ್ಕಳ: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಕಾರ್ಕಳ ತಾಲೂಕು ತಹಶೀಲ್ದಾರ್ ಪ್ರದೀಪ್ ಆರ್. ಅವರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ.

ಕರ್ತವ್ಯದ ಸಮಯದಲ್ಲೇ ಕಚೇರಿಯ ಮಹಿಳಾ‌ ಸಿಬ್ಬಂದಿಗಳೊಂದಿಗೆ ಅನುಚಿತವಾಗಿ ‌ವರ್ತಿಸುತ್ತಿದ್ದುದಾಗಿ ಜಿಲ್ಲಾಧಿಕಾರಿಗಳಿಗೆ ‌ಮಹಿಳಾ ಅಧಿಕಾರಿಗಳು ದೂರು ನೀಡಿದ್ದಾರೆ. ಕೆಲಸದ ವಿಷಯವವಾಗಿ ತಮ್ಮ ಕಚೇರಿಗೆ ಮಹಿಳಾ ಅಧಿಕಾರಿಗಳನ್ನು ಕರೆಸಿಕೊಂಡು ಅಲ್ಲಿ ಅನುಚಿತ ವರ್ತನೆ ತೋರುತ್ತಿದ್ದರು ಎಂದು ಮಹಿಳಾ ಸಿಬ್ಬಂದಿ ಆರೋಪಿಸಿರುವುದಾಗಿದೆ.

ಹಾಗೆಯೇ ಆರೋಪಿ ತಹಶೀಲ್ದಾರ್ ವಿರುದ್ಧ ಶಿಸ್ತು ಕ್ರಮ ಜರುಗಿಸಿ, ವಿಚಾರಣೆ ನಡೆಸಿ ಅವರನ್ನು ವರ್ಗಾವಣೆ ಮಾಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಸಂತ್ರಸ್ಥ ಸಿಬ್ಬಂದಿ ದೂರಿನಲ್ಲಿ ‌ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಂತ್ರಸ್ಥ ಮಹಿಳಾ ಸಿಬ್ಬಂದಿ ಮತ್ತು ಇತರ ಅಧಿಕಾರಿಗಳು ಸೋಮವಾರ ಮಧ್ಯಾಹ್ನ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ನಡೆದ ಘಟನೆಯ ಕುರಿತು ಸವಿವರವಾಗಿ ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಆದರೆ ಇಂತಹ ಗಂಭೀರ ಆರೋಪ ಎದುರಿಸುತ್ತಿರುವ ತಹಶೀಲ್ದಾ‌ರ್ ಪ್ರದೀಪ್‌ ಕುಮಾ‌ರ್ ಆ‌ರ್. ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವ ಬದಲು ಜಿಲ್ಲಾಧಿಕಾರಿಗಳು ಈ ಪ್ರಕರಣದ ತನಿಖೆಯನ್ನು ಶಿಸ್ತು ಪಾಲನಾ ಸಮಿತಿಗೆ ಒಪ್ಪಿಸಿದ್ದಾರೆ ಎನ್ನಲಾಗಿದೆ. ಈ ಪ್ರಕರಣದ ಕುರಿತು ಜಿಲ್ಲಾಧಿಕಾರಿಗಳು ಸಂಪರ್ಕಕ್ಕೆ ಸಿಗದ ಹಿನ್ನಲೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್‌ ಅವರನ್ನು ಸಂಪರ್ಕಿಸಿದಾಗ, ತಹಶೀಲ್ದಾ‌ರ್ ವಿರುದ್ಧ ದೂರು ಬಂದಿದೆ. ಇದರ ತನಿಖೆ ಶಿಸ್ತುಪಾಲನಾ ಸಮಿತಿ ನೀಡಲಾಗಿದೆ. ಲೈಂಗಿಕ ದೌರ್ಜನ್ಯ ಕುರಿತು ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ ಅವರು ಈ ಕುರಿತು ಜಿಲ್ಲಾಧಿಕಾರಿಗಳನ್ನೇ ಕೇಳಿ ಎಂದಿದ್ದಾರೆ. ಜಿಲ್ಲಾಧಿಕಾರಿ ಓರ್ವ ಮಹಿಳೆಯಾಗಿದ್ದರಿಂದ ತಹಶೀಲ್ದಾ‌ರ್ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಕ್ಷಣವೇ ಎಫ್‌ಐಆರ್ ದಾಖಲಿಸಬೇಕು ಎನ್ನುವುದು ಸಾರ್ವಜನಿಕರ ಆಗ್ರಹ.

ಪ್ರಕರಣದ ಬಳಿಕ ಆರೋಪಿ ತಹಶೀಲ್ದಾರ್ ಪ್ರದೀಪ್ ಅವರು ದಿಢೀರ್ ರಜೆ ತೆಗೆದುಕೊಂಡು ಹೋಗಿದ್ದು, ಅವರ ವಿರುದ್ದ ಕಾನೂನು ಕ್ರಮ ಜರುಗುವುದೇ ಎನ್ನುವುದು ಸಾರ್ವಜನಿಕರ ಸದ್ಯದ ಕುತೂಹಲ.















































error: Content is protected !!
Scroll to Top