ನವದೆಹಲಿ: ಪಶ್ಚಿಮಘಟ್ಟ ಪ್ರದೇಶಗಳ ಜನರು, ಕೃಷ್ಕರ ಭಯ, ಆತಂಕಗಳನ್ನು ಗಮನದಲ್ಲಿ ಇರಿಸಿಕೊಂಡು ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದ ನಿರ್ಧಾರಗಳ ಬಗ್ಗೆ ಇರುವ ಗೊಂದಲಗಳನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಸಲಹೆ ನೀಡಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿರುವ ಶ್ರೀಗಳು ಲಿಖಿತ ಪ್ರಸ್ತಾವನೆ ಸಲ್ಲಿಸಿರುವುದಾಗಿದೆ. ಕಸ್ತೂರಿ ರಂಗನ್ ವರದಿಯ ಬಗ್ಗೆ ಪಶ್ಚಿಮ ಘಟ್ಟದ ಜನರಲ್ಲಿ ಎದ್ದಿರುವ ಆತಂಕ, ಭಯ, ಗೊಂದಲಗಳಿಗೆ ಸೂಕ್ತ ಪರಿಹಾರ ಒದಗಿಸುವ ಅವಶ್ಯಕತೆ ಇದೆ ಎಂದು ಅವರು ಶಾ ಅವರಿಗೆ ತಿಳಿಸಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸುವ ಭರವಸೆಯನ್ನು ಶಾ ಅವರು ಶ್ರೀ ಗಳಿಗೆ ನೀಡಿದ್ದಾಗಿ ತಿಳಿದು ಬಂದಿದೆ.








































