ಮೈಸೂರು: ನಾಡಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿನಲ್ಲಿ ದಸರಾ ಆಯೋಜಿಸಿರುವ ಬಗ್ಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರು ಮಾತನಾಡಿದ್ದಾರೆ.
ಕರಾವಳಿ ಭಾಗದಲ್ಲಿ ಜನಪ್ರಿಯವಾಗಿರುವ ಕಂಬಳ ಕ್ರೀಡೆಯನ್ನು ಮೈಸೂರು ದಸರಾದಲ್ಲಿ ಆಯೋಜನೆ ಮಾಡುವ ಅವಶ್ಯಕತೆ ಇರಲಿಲ್ಲ ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ.
ಕಂಬಳ ಕರಾವಳಿ ಭಾಗದಲ್ಲಿ ತನ್ನದೇ ಆದ ಪರಂಪರೆ ಹೊಂದಿರುವ ಕ್ರೀಡೆ. ದಸರಾ ಹಬ್ಬದಲ್ಲಿ ಅದನ್ನು ಸೇರಿಸುವುದು ಸರಿಯಲ್ಲ ಎಂಬ ಅಭಿಪ್ರಾಯ ನನ್ನದು. ಕಂಬಳವನ್ನು ಪ್ರತ್ಯೇಕವಾಗಿ ಆಯೋಜನೆ ಮಾಡಿದರೆ ಹೆಚ್ಚಿನ ಮಹತ್ವ ಸಿಗುತ್ತದೆ. ಕಂಬಳ ದಸರಾದ ಭಾಗ ವಾದ ರೆ ಅದಕ್ಕೆ ಸಿಗಬೇಕಾದ ಮನ್ನಣೆ ಕಡಿಮೆಯಾಗಬಹುದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿರುವುದಾಗಿದೆ.





















