ವಡೋದರ: ಗುಜರಾತಿನ ಏಕತಾನಗರದಲ್ಲಿ ನಡೆದ 72 ನೇ ರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತುಳುನಾಡಿನ ಪ್ರತಿಭೆ, ನಟಿ ರೂಪಶ್ರೀ ವರ್ಕಾಡಿ ಅವರಿಗೆ ಅತ್ಯುತ್ತಮ ಪೋಷಕ ನಟಿ ಪುರಸ್ಕಾರ ಲಭಿಸಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ರೂಪಶ್ರೀ ಅವರು ಪುರಸ್ಕಾರವನ್ನು ಪಡೆದುಕೊಂಡಿದ್ದಾರೆ. ಆ ಮೂಲಕ ತುಳುನಾಡಿಗೆ ಹೆಮ್ಮೆ ತಂದಿದ್ದಾರೆ.
ಮಿಥ್ಯ ಎಂಬ ಕನ್ನಡ ಚಿತ್ರದಲ್ಲಿನ ಅದ್ಭುತ ಅಭಿನಯಕ್ಕಾಗಿ ರೂಪಶ್ರೀ ಅವರಿಗೆ ಈ ಪುರಸ್ಕಾರ ಲಭಿಸಿದೆ.





















