ಆರೋಗ್ಯದ ಹಿತದೃಷ್ಟಿಯಿಂದ ಉಪ್ಪಿನ ಬಳಕೆ ನಿಯಂತ್ರಣಕ್ಕೆ ಸರ್ಕಾರದಿಂದ ವಿನೂತನ ಕ್ರಮ

ಬೆಂಗಳೂರು: ಉಪ್ಪು ಮತ್ತು ಸಕ್ಕರೆಯ ಬಳಕೆ ನಿಯಂತ್ರಣಕ್ಕೆ ಮುಂದಾಗಿರುವ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ ಇರಿಸಿದೆ. ಈ ಬಗ್ಗೆ ಸಚಿವ ಯು.ಟಿ. ಖಾದರ್ ಮಾಹಿತಿ ನೀಡಿದ್ದಾರೆ.

ಪ್ರಸ್ತುತ ದಿನಗಳಲ್ಲಿ ಅತಿಯಾದ ಉಪ್ಪು ಮತ್ತು ಸಕ್ಕರೆ ಸೇವನೆಯಿಂದಾಗಿ ಜನರ ಆರೋಗ್ಯದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ.

ಹಿಂದೆ ಸರ್ಕಾರದಿಂದಲೇ ಸಬ್ಸಿಡಿ ದರದಲ್ಲಿ ಸಕ್ಕರೆ ಮತ್ತು ಉಪ್ಪನ್ನು ವಿತರಿಸಲಾಗುತ್ತಿತ್ತು. ಆದರೆ, ಇವುಗಳ ಅತಿಯಾದ ಬಳಕೆದಿಂದ ಆರೋಗ್ಯ ಸಂಬಂಧಿ ಸಮಸ್ಯೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಸಬ್ಸಿಡಿ ವಿತರಣೆಯನ್ನು ಈಗ ನಿಲ್ಲಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಇದರೊಂದಿಗೆ ಸಾರ್ವಜನಿಕರ ದೈಹಿಕ ಆರೋಗ್ಯಕ್ಕೆ ಪೂರಕವಾಗುವಂತಹ ಮತ್ತು ಹಾನಿಕಾರಕವಲ್ಲದ ರೀತಿಯ ಉಪ್ಪನ್ನು ಮಾತ್ರ ತಯಾರಿಸಿ ಮಾರಾಟ ಮಾಡುವಂತೆ ಉತ್ಪಾದಕರಿಗೆ ಆರೋಗ್ಯ ಇಲಾಖೆ ಸೂಕ್ತ ಸೂಚನೆ ಹಾಗೂ ಮಾರ್ಗದರ್ಶನ ನೀಡಿದೆ.

ಈ ಜಾಗೃತಿ ಅಭಿಯಾನದ ಭಾಗವಾಗಿ, ಮದ್ಯದ ಬಾಟಲಿಗಳ ಮೇಲೆ ನೀಡಲಾಗುವ ಆರೋಗ್ಯ ಎಚ್ಚರಿಕೆಯ ಮಾದರಿಯಲ್ಲೇ ಇನ್ಮುಂದೆ ಉಪ್ಪಿನ ಪ್ಯಾಕೆಟ್‌ಗಳ ಮೇಲೆಯೂ ‘ಹಾನಿಕಾರಕ’ ಎಂಬ ಎಚ್ಚರಿಕೆ ಸ್ಟಿಕ್ಕರ್ ಪ್ರಿಂಟ್ ಮಾಡುವುದನ್ನು ಕಡ್ಡಾಯಗೊಳಿಸಲಾಗುತ್ತಿದೆ. ಉಪ್ಪಿನ ಅತಿಯಾದ ಬಳಕೆಯಿಂದಾಗುವ ಅಪಾಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಆರೋಗ್ಯ ಇಲಾಖೆಯು ಈ ವಿಶಿಷ್ಟ ನಿಯಮ ಜಾರಿಗೆ ತರಲು ಸಿದ್ಧತೆ ನಡೆಸಿದ್ದು, ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಸಂಸ್ಥೆಗಳಿಗೆ ಈಗಾಗಲೇ ಅಗತ್ಯ ನಿರ್ದೇಶನಗಳನ್ನು ನೀಡಿದೆ.









































error: Content is protected !!
Scroll to Top