ಮಂಗಳೂರು: 2017 ರಲ್ಲಿ ಪಾಂಡೇಶ್ವರ ಪೊಲೀಸ್ ಠಾಣೆಗೆ ಸಂಬಂಧಿಸಿದ ಪ್ರಕರಣವೊಂದಕ್ಕೆ ಸಂಬಂಧಿಸಿದ ಹಾಗೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿಯನ್ನು ಕಾರ್ಕಳದ ಕುಕ್ಕುಂದೂರು ಕೆಳಗಿನ ಅಂಗಡಿ ಮನೆಯ ಪಾರ್ಥಸಾರಥಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿದೆ.
ಪಾರ್ಥಸಾರಥಿ ಕಳೆದ ಒಂಬತ್ತು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದ. ಆತನನ್ನು ಕದ್ರಿ ಮೈದಾನದ ಸಮೀಪ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.






























































