ಸೃಜನ ಸಾಹಿತ್ಯ ಸೌರಭ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರ್ಕಳ: ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಡಾ. ಸುಧಾಕರ ಶೆಟ್ಟಿ, (ಅಧ್ಯಕ್ಷರು ಪದ್ಮ ಗೋಪಾಲ ಎಜುಕೇಶನ್ ಟ್ರಸ್ಟ್ ಗಣಿತ ನಗರ ಕುಕ್ಕುಂದೂರು) ಅವರ ಪ್ರಾಯೋಜಕತ್ವದಲ್ಲಿ ದಿ| ಗೋಪಾಲ ಭಂಡಾರಿ ಅವರ ಸ್ಮರಣಾರ್ಥ ಪ್ರದಾನಿಸಲಾಗುವ ಸೃಜನ ಸಾಹಿತ್ಯ ಸೌರಭ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕನ್ನಡ ನಾಡು- ನುಡಿ-ಸಂಸ್ಕೃತಿ- ಸಾಹಿತ್ಯ ಕಾಯಕದಲ್ಲಿ ತೊಡಗಿ ಕೊಡಿಸಿಕೊಂಡ ಉತ್ತಮ ಸಂಘ ಸಂಸ್ಥೆಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಶಾಶ್ವತ ಫಲಕವನ್ನು ಒಳಗೊಂಡಿದೆ.

ಅರ್ಜಿ ಸಲ್ಲಿಸುವವರು ಸಂಪೂರ್ಣ ಮಾಹಿತಿಯನ್ನು ಒಳಗೊಂಡ ಅರ್ಜಿಯನ್ನು ‘ದೇವದಾಸ್ ಕೆರೆಮನೆ, ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ, C/o “ವಂದ್ಯುಕ್ತ” ನಿಸರ್ಗನಗರ, ಶ್ಯಾಮಲಾ ಕಾಂಪೌಂಡ್, ಮಿಯ್ಯಾರು, ಮುಡಾರು, ಬಜಗೋಳಿ ಅಂಚೆ, ಕಾರ್ಕಳ -574122 ಈ ವಿಳಾಸಕ್ಕೆ ಅಕ್ಟೋಬರ್ 15 ರ ಒಳಗೆ ತಲುಪುವಂತೆ ಕಳುಹಿಸಿ ಕೊಡುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.









































error: Content is protected !!
Scroll to Top