ಭಾರತಕ್ಕೆ ಬಂತು ಶಾರ್ಜಾದಲ್ಲಿ ‌ಹತ್ಯೆಯಾದ ಪ್ರಕಾಶ್ ಕುಂದರ್ ಮೃತದೇಹ: ಕುಂದಾಪುರದಲ್ಲಿ ಅಂತ್ಯಕ್ರಿಯೆ

ಉಡುಪಿ: ಶಾರ್ಜಾದಲ್ಲಿ ‌ಹತ್ಯೆಯಾದ ಉಡುಪಿ ಮೂಲದ ಪ್ರಕಾಶ್ ಕುಂದರ್ ಅವರ ಮೃತದೇಹವನ್ನು ವಿಮಾನದ ಮೂಲಕ ಇಂದು ಬೆಳಗ್ಗೆ ಭಾರತಕ್ಕೆ ತರಲಾಗಿದ್ದು, ಕುಂದಾಪುರದ ಸಿಎಸ್ಐ ಸಮುದಾಯದ ಸ್ಮಶಾನದಲ್ಲಿ ಅವರ ಅಂತ್ಯಕ್ರಿಯೆಯನ್ನು ಕುಟುಂಬವರ್ಗ ನಡೆಸಿದೆ.

ಶಾರ್ಜಾ‌ದಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಆ್ಯಂಬುಲನ್ಸ್ ಮೂಲಕ ಅವರ ಹುಟ್ಟೂರಾದ ಹೊನ್ನನಕೇರಿ ಮನೆಗೆ ತಂದು, ಅಲ್ಲಿ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಬಳಿಕ ಅವರ ಸಮುದಾಯದ ರುದ್ರಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಿತು.

ಅಂತ್ಯಸಂಸ್ಕಾರದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಶಾಸಕ ಕಿರಣ್ ಕುಮಾರ್ ಕೊಡ್ಲಿ, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ತ, ಕುಟುಂಬಸ್ಥರು, ಸ್ನೇಹಿತರು, ಬಂಧುಗಳು, ಸಾರ್ವಜನಿಕರು ಭಾಗವಹಿಸಿದ್ದರು.











































error: Content is protected !!
Scroll to Top