ಹಾಲಿನ ದರ ಏರಿಕೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ: ಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: ಶೀಘ್ರವೇ ರಾಜ್ಯದಲ್ಲಿ ಹಾಲಿನ ದರ ಏರಿಕೆಯಾಗುವ ಎಲ್ಲಾ ಸೂಚನೆ ಇದೆ. ರೈತರ ಹಿತ ಮತ್ತು ಹಾಲು ಒಕ್ಕೂಟಗಳನ್ನು ನಷ್ಟದಿಂದ ‌ಮೇಲೆತ್ತುವ ನಿಟ್ಟಿನಲ್ಲಿ ಹಾಲಿನ ಬೆಲೆ ಏರಿಕೆಗೆ ಸಂಬಂಧಿಸಿದ ಹಾಗೆ ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ‌ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಸಿ ಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಹಾಲು ಒಕ್ಕೂಟಗಳು ಈಗಾಗಲೇ ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ, ಹಾಲು ಉತ್ಪಾದಕರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಹಾಗೆಯೇ ಅವುಗಳ ಪರಿಹಾರಕ್ಕೆ ಸರ್ಕಾರದಿಂದ ಕೈಗೊಳ್ಳಬೇಕಾದ ಕ್ರಮಗಳ ಬಗೆಗೂ ಮಾತನಾಡಿದ್ದಾರೆ.

ಎಲ್ಲಾ ಆಯಾಮಗಳನ್ನು ಪರಿಶೀಲನೆ ಮಾಡಿ ಹಾಲಿನ ದರ ಏರಿಕೆ ಮಾಡಲು ಸರ್ಕಾರ ಯೋಚಿಸುತ್ತಿದೆ. ನೆರೆ ರಾಜ್ಯಗಳಲ್ಲಿನ ಹಾಲಿನ ದರಗಳ ಬಗೆಗೂ ಮಾಹಿತಿ ಪಡೆಯಲಾಗುವುದು. ರೈತರು ಮತ್ತು ಗ್ರಾಹಕರಿಗೆ ಹೊರೆಯಾಗದ ರೀತಿಯಲ್ಲಿ ಏನಾದರೂ ಪರಿಹಾರ ಕಂಡುಕೊಳ್ಳಲು ಸರ್ಕಾರ ಪ್ರಯತ್ನ ನಡೆಸುತ್ತದೆ ಎಂದಿದ್ದಾರೆ.

ಸರ್ಕಾರಕ್ಕೆ ರೈತರ ಹಿತ ಕಾಪಾಡುವುದೇ ಮೊದಲ ಆದ್ಯತೆ. ದುಡಿಮೆಗೆ ನ್ಯಾಯವಾದ ಫಲ ಸಿಗಬೇಕು. ಆದ್ದರಿಂದ ಈ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.

























































































































error: Content is protected !!
Scroll to Top