ಬಂಟ್ವಾಳ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ವಿಚಾರಣೆಗೆ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಪೊಲೀಸರಿಂದ ನೊಟೀಸು

ಪೊಲೀಸರು ನೊಟೀಸ್ ನೀಡಿರುವುದರ ಹಿಂದೆ ವ್ಯವಸ್ಥಿತ ಸಂಚು ಇದೆ ಎಂದು ಹಿಂದೂ ಮುಖಂಡ ಶರಣ್ ಪಂಪ್ವೆಲ್ ಆರೋಪ

ಮಂಗಳೂರು: ಬಂಟ್ವಾಳದ ಅಬ್ದುಲ್‌ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ವಿಚಾರಣೆಗೆ ಹಾಜರಾಗಲು ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಪೊಲೀಸ್ ಇಲಾಖೆ ನೊಟೀಸು ‌ನೀಡಿದೆ.

ಪೋಲೀಸ್ ಇಲಾಖೆಯ ಈ ಹೆಜ್ಜೆಯ ವಿರುದ್ಧ ಹಿಂದೂ ಸಂಘಟನೆಗಐದ ಬಜರಂಗದಳ, ವಿಶ್ವ ಹಿಂದೂ ಪರಿಷತ್ ಆಕ್ರೋಶ ಹೊರಡಿಸಿದೆ.

ಈ ಸಂಬಂಧ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಮಾತಾನಾಡಿದ್ದು, ಪೊಲೀಸರು ನೊಟೀಸ್ ನೀಡಿರುವುದರ ಹಿಂದೆ ವ್ಯವಸ್ಥಿತ ಸಂಚು ಇದೆ. ಕಾಂಗ್ರೆಸ್ ಸರ್ಕಾರ ಹಿಂದೂ ಸಂಘಟನೆಗಳ ವಿರುದ್ಧ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಯಾರ್ಯಾರನ್ನೋ ತೃಪ್ತಿ ಪಡಿಸಲು ಹಿಂದೂ ಸಂಘಟನೆಗಳನ್ನು ಗುರಿ ಮಾಡಿದರೆ, ಮುಂದಿನ ದಿನಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ದೇಶಕ್ಕಾಗಿ ನಮ್ಮ ಸಂಘಟನೆ ಕೆಲಸ ಮಾಡುತ್ತಿದೆ. ನಮ್ಮನ್ನು ಮುಗಿಸುವ ಸಂಚು ಮಾಡಿದಲ್ಲಿ ಹಿಂದೂಗಳು ಅದಕ್ಕೆ ತಕ್ಕ ಉತ್ತರ ನೀಡುತ್ತಾರೆ. ರಹಿಮಾನ್ ಕೊಲೆ ಪ್ರಕರಣದಲ್ಲಿ ಪ್ರಭಾಕರ ಭಟ್ ಅವರನ್ನು ಸಿಲುಕಿಸುವ ಸಂಚು ನಡೆಸಿದರೆ ಹಿಂದೂ ಸಂಘಟನೆಗಳು ರಸ್ತೆಗೆ ಇಳಿಯುತ್ತವೆ ಎಂದು ಎಚ್ಚರಿಕೆ ನೀಡಿದ್ದಾರೆ. ಹಾಗೆಯೇ ಎಸ್ಪಿ ಕಚೇರಿ ಚಲೋ ನಡೆಸುವುದಾಗಿಯೂ ಹೇಳಿದ್ದಾರೆ. ಪೊಲೀಸರಿಗೆ ಸ್ಪಷ್ಟವಾಗಿ ಗೊತ್ತಿದೆ ಯಾರನ್ನು ಬಂಧಿಸಲಾಗಿದೆಯೋ ಅವರಿಗೂ ಈ ಪ್ರಕರಣಕ್ಕೂ ಯಾವ ರೀತಿಯ ಸಂಬಂಧವೂ ಇಲ್ಲ ಎಂದು. ನ್ಯಾಯಾಲಯ ಕೋಕಾ ಕೇಸ್‌ನಲ್ಲಿ ಜಾಮೀನು ಕೊಟ್ಟಿದೆ. ಆದರೂ ಪೊಲೀಸ್ ಇಲಾಖೆ ಗೂಂಡಾ ಕಾಯ್ದೆ ಹಾಕುತ್ತಾರೆ. ಇವರಿಗೆ ಒತ್ತಡ ಹಾಕುತ್ತಿರುವವರು ಯಾರು? ಎಂದು ಪ್ರಶ್ನೆ ಮಾಡಿದ್ದಾರೆ.















































































error: Content is protected !!
Scroll to Top