ಉಡುಪಿ: ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಸಂಬಂಧಿಸಿದಂತೆ ರಸ್ತೆ ಸುರಕ್ಷತಾ ಸಮಿತಿ ಸಭೆಯು ಉಡುಪಿ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನಡೆಯಿತು.
ಸಭೆಯಲ್ಲಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ ರಸ್ತೆಗಳಲ್ಲಿ ಜನಸಾಮಾನ್ಯರ ವಾಹನಗಳು ಸುರಕ್ಷಿತವಾಗಿ ಸಂಚರಿಸಲು ಅಗತ್ಯವಾದ ರಸ್ತೆ ಅಭಿವೃದ್ಧಿ ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಅಪಘಾತ ಪ್ರಕರಣಗಳು ಆಗದಂತೆ ಕ್ರಮವಹಿಸಬೇಕೆಂದು ಇಲಾಖಾ ಅಧಿಕಾರಿಗಳಿಗೆ ಸೂಚಸಲಾಯಿತು.
ಅಲ್ಲದೇ ಎಲ್ಲಾ ವಾಹನಗಳಿಗೂ ವೇಗ ನಿಯಂತ್ರಕ ಅಳವಡಿಸಲು ಈಗಾಗಲೇ ಸೂಚಿಸಲಾಗಿದ್ದು, ಇನ್ನು ಒಂದು ತಿಂಗಳ ಒಳಗಾಗಿ ಪ್ರತಿಯೊಂದು ವಾಹನಕ್ಕೂ ಸ್ಪೀಡ್ ಗವರ್ನರ್ ಅಳವಡಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಯಿತು.

ನಗರಸಭಾ ವ್ಯಾಪ್ತಿಯಲ್ಲಿ ಗುರುತಿಸಲಾದ ವೆಂಡಿಂಗ್ ಝೋನ್‌ಗಳಲ್ಲಿ ಶೀಘ್ರವಾಗಿ ಶೆಲ್ಟರ್‌ಗಳನ್ನು ನಿರ್ಮಿಸಲು ಕ್ರಮವಹಿಸುವಂತೆ ಮತ್ತು ಎಲ್ಲಾ ಖಾಸಗಿ / ಸರ್ಕಾರಿ ಬಸ್‌ಗಳಲ್ಲಿ ಕಡ್ಡಾಯವಾಗಿ ಬಾಗಿಲುಗಳನ್ನು ಅಳವಡಿಸಿರುವ ಕುರಿತು ಪರಿಶೀಲಿಸಿ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಯವರಿಗೆ ಸೂಚನೆಯನ್ನು ನೀಡಲಾಯಿತು.















