ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ಎನ್.ಎಸ್. ಎಸ್. ದಿನಾಚರಣೆ

ಮಣಿಪಾಲ: ಜ್ಞಾನಸುಧಾ ಪ. ಪೂ. ಕಾಲೇಜಿನಲ್ಲಿ ಎನ್.ಎಸ್.ಎಸ್. ದಿನಾಚರಣೆ ನಡೆಯಿತು.

ಮುಖ್ಯ ಅಥಿತಿ ಡಾ. ಜಿ.ಶಂಕರ್ ಮಹಿಳಾ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಇಲ್ಲಿನ ಪ್ರಾಂಶುಪಾಲರಾದ ಡಾ. ನಿಕೇತನ ಮಾತನಾಡಿ, ಸಾಮಾನ್ಯ ವಿದ್ಯಾರ್ಥಿಗಳನ್ನು ಅಸಾಮಾನ್ಯ ಪ್ರತಿಭೆಗಳನ್ನಾಗಿ ರೂಪಿಸುವಲ್ಲಿ ಎನ್.ಎಸ್.ಎಸ್. ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದು ದೇಶದ ಸತ್ಪ್ರಜೆಗಳಾಗಿ ಮೂಡಿ ಬರಲಿ ಎಂದು ಹಾರೈಸಿದರು.

ಎನ್.ಎಸ್. ಎಸ್. ದಿನದ ಪ್ರಯುಕ್ತ ಆಯೋಜಿಸಿದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಿಬಿರದಲ್ಲಿ ಭಾಗವಹಿಸಿದ ಪೂರ್ವ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ನೀಡಿ ಅಭಿನಂದಿಸಲಾಯಿತು.

ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಮತ್ತು ಕಾಲೇಜಿನ ಉಪಪ್ರಾಂಶುಪಾಲ ರವಿ ಜಿ. ಸ್ವಾಗತಿಸಿ ಪ್ರಾಸ್ತಾವಿಸಿದರು.. ಸ್ವಯಂ ಸೇವಕಿಯರು ಎನ್.ಎಸ್.ಎಸ್ ಗೀತೆಗೆ ದನಿಯಾದರು. ಗ್ರೀಷ್ಮಾ ಕಾರ್ಯಕ್ರಮ ನಿರೂಪಿಸಿದರು.



































error: Content is protected !!
Scroll to Top