ಕಾರ್ಕಳ: ಭಾರತೀಯ ವಿಕಾಸ ಟ್ರಸ್ಟ್ , ಮಣಿಪಾಲ ಹಾಗೂ ಬೆಂಗಳೂರಿನ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ, ಗ್ರಾಮ ಪಂಚಾಯತ್ ಕುಕ್ಕುಂದೂರು, ಶ್ರೀ ತುಳಸಿ ಸಂಜೀವಿನಿ ಒಕ್ಕೂಟದ ಸಹಯೋಗದಲ್ಲಿ ಮಳೆನೀರು ಕೊಯ್ಲು, ತ್ಯಾಜ್ಯ ನಿರ್ವಹಣೆ ಹಾಗೂ ನವೀಕರಿಸಬಹುದಾದ ಇಂಧನ ಕುರಿತು ಜಾಗೃತಿ ಕಾರ್ಯಕ್ರಮ ಕುಕ್ಕುಂದೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಶ್ರೀ ತುಳಸಿ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟದ ಅಧ್ಯಕ್ಷೆ ಕಾಲಾರಾಣಿಯವರು ಉದ್ಘಾಟಿಸಿದರು.
ರಾಜ್ಯ ಸಂಪನ್ಮೂಲ ವ್ಯಕ್ತಿ ಜೋಸೆಫ್ ರೆಬೆಲ್ಲೊ ಅವರು ಮಳೆನೀರು ಕೊಯ್ಲು ಹಾಗೂ ತ್ಯಾಜ್ಯ ನಿರ್ವಹಣೆ ಕುರಿತು ಮಾಹಿತಿ ನೀಡಿದರು. ಭಾರತೀಯ ವಿಕಾಸ ಟ್ರಸ್ಟಿನ ಕಾರ್ಯಕ್ರಮ ಅಧಿಕಾರಿ ಪ್ರತಿಮಾ ಅವರು ನವೀಕರಿಸಬಹುದಾದ ಇಂಧನದ ಬಳಕೆ, ಅದರ ಪ್ರಯೋಜನಗಳು ಹಾಗೂ ಪರಿಸರ ಸಂರಕ್ಷಣೆಯಲ್ಲಿ ಅದರ ಪಾತ್ರದ ಕುರಿತು ಮಾಹಿತಿ ನೀಡಿದರು.

ಕುಕ್ಕುಂದೂರು ಗ್ರಾಮ ಪಂಚಾಯತಿನ ಪ್ರಭಾರ ಕಾರ್ಯದರ್ಶಿ ಸುಜಾತಾ, ರಾಜ್ಯ ಸಂಪನ್ಮೂಲ ವ್ಯಕ್ತಿ ಜೋಸೆಫ್ ರೆಬೆಲ್ಲೊ, ಭಾರತೀಯ ವಿಕಾಸ ಟ್ರಸ್ಟಿನ ಕಾರ್ಯಕ್ರಮ ಅಧಿಕಾರಿ ಪ್ರತಿಮಾ, ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ ಸುಪ್ರೀತಾ ಹಾಗೂ ಏಮ್ ಬಿ ಕೆ ಸುಮನ ರಾವ್ ಉಪಸ್ಥಿತರಿದ್ದರು.
ಸಂಜೀವಿನಿ ಒಕ್ಕೂಟದ ಎಲ್ ಸಿ ಆರ್ ಪಿ ಸರೋಜ ಸ್ವಾಗತಿಸಿ, ಮಾಧವಿ ಅವರು ವಂದಿಸಿದರು.
ಕಾರ್ಯಕ್ರಮದಲ್ಲಿ ಒಟ್ಟು 87 ಸ್ವಸಹಾಯ ಸಂಘಗಳ ಮಹಿಳೆಯರು ಭಾಗವಹಿಸಿ, ಮಳೆನೀರು ಸಂರಕ್ಷಣೆ, ತ್ಯಾಜ್ಯ ನಿರ್ವಹಣೆ ಹಾಗೂ ನವೀಕರಿಸಬಹುದಾದ ಇಂಧನದ ಕುರಿತು ಉಪಯುಕ್ತ ಮಾಹಿತಿಯನ್ನು ಪಡೆದುಕೊಂಡರು.


















