ಆಟೋ-ಟೆಂಪೋ ಅಪಘಾತದಲ್ಲಿ ಗಾಯಗೊಂಡಿದ್ದ ಒಂದೂವರೆ ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೆ ಸಾವು

ಕಾಪು: ನಗರದ ಫ್ಲೈಓವರ್ ಬಳಿ ಕಳೆದ ಶನಿವಾರ ನಡೆದ ಆಟೋ ರಿಕ್ಷಾ ಮತ್ತು ಟೆಂಪೋ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಒಂದೂವರೆ ವರ್ಷದ ಮಗು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ.

ಅಟೋ ರಿಕ್ಷಾ ಉಚ್ಚಿಲದಿಂದ ಉಡುಪಿ ಕಡೆಗೆ ಹೋಗುತ್ತಿದ್ದು, ರಸ್ತೆಬದಿಯ ಬ್ಯಾನರ್ ತೆರವುಗೊಳಿಸಲು ಬಳಸಲಾಗುತ್ತಿದ್ದ ಕಾಪು ಪುರಸಭೆಯ ಟೆಂಪೋ ಡಿಕ್ಕಿ ಹೊಡೆದಿತ್ತು.

ಅಪಘಾತದಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಉಚ್ಚಿಲ ನಿವಾಸಿ ಸಂಧ್ಯಾ, ಅವರ ಮಕ್ಕಳಾದ ಗಾಯನ್ ಮತ್ತು ಸುವಿತ್ ಗಾಯಗೊಂಡಿದ್ದರು.



































error: Content is protected !!
Scroll to Top