ಒಂದು ಕೋಟಿ ಮಹಿಳೆಯರಿಗೆ ಸುಮಾರು 250 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್ ಕಾರ್ಡ್
ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದ ಶಕ್ತಿ ಯೋಜನೆಯ ದುರ್ಬಳಕೆ ತಡೆಯಲು ಆಧಾರ್ ಕಾರ್ಡ್ ಬದಲು ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ.
ಸುಮಾರು 250 ಕೋಟಿ ರೂ. ವೆಚ್ಚದಲ್ಲಿ ಒಂದು ಕೋಟಿ ಜನರಿಗೆ ಸ್ಮಾರ್ಟ್ ಕಾರ್ಡ್ ವಿತರಣೆಗೆ ಟೆಂಡರ್ ಕರೆದು ಅದನ್ನು ಶೀಘ್ರ ಜಾರಿಗೆ ತರಲು ಸಿದ್ಧತೆ ನಡೆಸಿದೆ. ಸ್ಮಾರ್ಟ್ ಕಾರ್ಡ್ ಪಡೆಯಲು ಆಧಾರ್ ಮತ್ತು ವೋಟರ್ ಕಾರ್ಡ್ ನೀಡಬೇಕಾಗಿದ್ದು, SIR ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದಿದ್ದರೆ ಸರ್ಕಾರದ ಯಾವ ಗ್ಯಾರಂಟಿ ಯೋಜನೆಗಲೂ ಲಭ್ಯವಾಗುವುದಿಲ್ಲ.

ಮೊದಲಿಗೆ ಬಿಎಂಟಿಸಿ ಪ್ರಯಾಣಿಕರಿಗೆ ಈ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸಿ, ನಂತರ ಹಂತ-ಹಂತವಾಗಿ ಉಳಿದ ಸಾರಿಗೆ ನಿಗಮಗಳ ಪ್ರಯಾಣಿಕರಿಗೂ ನೀಡಲಾಗುತ್ತದೆ. ವಿಶೇಷವೆಂದರೆ, ಈ ಸ್ಮಾರ್ಟ್ ಕಾರ್ಡ್‌ಗಳನ್ನು ‘ನಮ್ಮ ಮೆಟ್ರೋ’ ಸಂಚಾರಕ್ಕೂ ಬಳಸಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ರಾಜ್ಯದಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚು ಶಕ್ತಿ ಯೋಜನೆ ಫಲಾನುಭವಿಗಳಿದ್ದಾರೆ. ಅನರ್ಹರನ್ನು ಶಕ್ತಿ ಯೋಜನೆಯಿಂದ ಕೈಬಿಡಲು ಸರ್ಕಾರ ಚಿಂತನೆ ನಡೆಸಿದೆ. ಸ್ಮಾರ್ಟ್ ಕಾರ್ಡ್ ವಿತರಣೆಗೆ ಟೆಂಡರ್ ಕರೆದಿರುವ ಸರ್ಕಾರ ಮಹಿಳೆಯರು ಹಾಗೂ ತೃತೀಯ ಲಿಂಗಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಣೆಗೆ ಮುಂದಾಗಿದೆ. ಈ ಕಾರ್ಡ್ ಮೂಲಕ ಮೆಟ್ರೋದಲ್ಲೂ ಪ್ರಯಾಣಿಸಬಹುದಾಗಿದೆ.
ಬೆಂಗಳೂರು ಒನ್, ಕರ್ನಾಟಕ ಓನ್, ಬಾಪುಜಿ ಸೇವಾ ಕೇಂದ್ರ, ಸೈಬರ್ ಸೆಂಟರ್ ಗಳಲ್ಲಿ ಆನ್ಲೈನ್ ಅರ್ಜಿ ಸಲ್ಲಿಕೆ ಮಾಡಿ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಬಹುದು.

















