ಸಾರಿಗೆ ಸಚಿವ ಬೈರತಿ ಸುರೇಶ್ ಹೇಳಿದ್ದೇನು ಗೊತ್ತಾ..
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಬಸ್ಸು ಪ್ರಯಾಣ ದರ ಏರಿಸಲು ಸರ್ಕಾರ ಚಿಂತನೆ ನಡೆಸಿದೆ.
ಈ ಸಂಬಂಧ ಸಚಿವ ಬೈರತಿ ಸುರೇಶ್ ಮಾತನಾಡಿದ್ದು, ಕಳೆದ ಒಂದು ವರ್ಷದಲ್ಲಿ ಸುಮಾರು ನಾಲ್ಕೈದು ಬಾರಿ ಡಿಸೇಲ್ ದರ ಹೆಚ್ಚಾಗಿದೆ. ಇದರಿಂದಾಗಿ ಡಿಸೇಲ್ ಬೆಲೆ 15 ರಿಂದ 16 ರೂ. ವರೆಗೆ ಏರಿದೆ. ಇದು ಸಾರಿಗೆ ನಿಗಮಗಳ ವಾರ್ಷಿಕ 8 ಸಾವಿರ ಕೋಟಿ ರೂ. ನಷ್ಟಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ಬಸ್ ಪ್ರಯಾಣ ದರ ಹೆಚ್ಚಳ ಸಂಬಂಧ ವರದಿ ತಯಾರಿಸಲು ನೇಮಕಗೊಂಡಿರುವ ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಉನ್ನತ ಮಟ್ಟದ ಸಮಿತಿ 1-2 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಆ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿಟ್ಟು ಚರ್ಚಿಸಿ, ಮುಖ್ಯಮಂತ್ರಿಗಳ ಅನುಮೋದನೆ ಪಡೆದ ನಂತರ ಪ್ರಯಾಣ ದರವನ್ನು ಪರಿಷ್ಕರಣೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.




























































