ನೀಟ್ ಸೇರಿದಂತೆ ಪ್ರಮುಖ ಪರೀಕ್ಷೆಗಳನ್ನು ಆನ್‌ಲೈನ್ ಮೂಲಕವೇ ನಡೆಸಲು ಕೇಂದ್ರ ಸರ್ಕಾರ ಚಿಂತನೆ

ಪರೀಕ್ಷಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಈ ಕ್ರಮ

ನವದೆಹಲಿ: ಪರೀಕ್ಷಾ ಅಕ್ರಮ ತಡೆಯಲು ದೇಶಾದ್ಯಂತ ನಡೆಯುವ ನೀಟ್ ಸೇರಿದಂತೆ ಎಲ್ಲಾ ರೀತಿಯ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆನ್‌ಲೈನ್ ಮೂಲಕ ನಡೆಸುವುದಕ್ಕೆ ಕೇಂದ್ರ ಸರ್ಕಾರ ಸಿದ್ಧತೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ‌.

ಎಲ್ಲಾ ರೀತಿಯ ಪರೀಕ್ಷಾ ಅಕ್ರಮಗಳನ್ನು ತಡೆಯುವುದು, ಪಾರದರ್ಶಕತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಶಿಕ್ಷಣ ಸಚಿವಾಲಯ ಈ ಕ್ರಮಕ್ಕೆ ಮುಂದಾಗಿದೆ. ಪೆನ್ ಪೇಪರ್ ಕ್ರಮವನ್ನು ಆನ್‌ಲೈನ್‌ಗೆ ಬದಲಾಯಿಸಲು ಸಿದ್ಧತೆ ನಡೆಯುತ್ತಿದೆ.

ಪರೀಕ್ಷಾ ವ್ಯವಸ್ಥೆಯ ಪರಿಶೀಲನೆಗೆ ರಚಿಸಲಾದ ನಂದನ್ ನಿಲೇಕಣಿ ಅವರಿಂದ ವರದಿ ಬಂದ ಬಳಿಕ ಈ ಸಂಬಂಧ ಅಂತಿಮ ನಿರ್ಣಯಗಳು ಪ್ರಕಟವಾಗಲಿವೆ. ಪರೀಕ್ಷಾ ಅಕ್ರಮ ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಆನ್‌ಲೈನ್ ವಿಧಾನ ಪರಿಹಾರವಾಗಲಿದೆ.



































error: Content is protected !!
Scroll to Top