ಉಡುಪಿ: ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಖಾಸಗಿ ಬಸ್ಸೊಂದಕ್ಕೆ ಕಾರಿನಲ್ಲಿ ಹೋಗುತ್ತಿದ್ದ ಮದ್ಯದ ಅಮಲಿನಲ್ಲಿದ್ದ ನಾಲ್ಕು ಮಂದಿ ಯುವಕರು ತಮ್ಮ ಕಾರ್ ಮೂಲಕ ತಡೆಯೊಡ್ಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗೆ ಎಚ್ಚರಿಕೆ ನೀಡಿ ಕಳುಹಿಸಿದ ಘಟನೆ ನಡೆದಿದೆ.
ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಗದೂತ ಬಸ್‌ಗೆ ತಡೆಯೊಡ್ಡುತ್ತಾ ಸಾಗಿದ್ದ ಕಾರ್ ಮುಲ್ಕಿ ಸಮೀಪ ಬಸ್ಸನ್ನು ತಡೆದು ಕಾರಿನಿಂದ ಇಳಿದು ಬಂದು ಬಸ್ ಚಾಲಕನಿಗೆ ಅವಾಚ್ಯವಾಗಿ ನಿಂದಿಸಿದ್ದರು.
ತಕ್ಷಣವೇ ಬಸ್ಸಿನ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಕಾರಿನಲ್ಲಿ ಮದ್ಯದ ಅಮಲಿನಲ್ಲಿದ್ದ ಯುವಕರ ವಿರುದ್ಧ ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣ ದಾಖಲಿಸಿ, ಆರೋಪಿಗಳಿಗೆ ಎಚ್ಚರಿಕೆ ಕೊಟ್ಟು ಕಳುಹಿಸಿದ ಘಟನೆ ನಡೆದಿದೆ.




















