ಕಾರ್ಕಳ: ಗಾಂಧಿ ಜಯಂತಿಯಂದು ಮದ್ಯ ಮಾರಾಟ ನಿಷೇಧವಿದ್ದರೂ ಅಕ್ರಮವಾಗಿ ಮಾರಾಟ ಮಾಡುತ್ತಿದ್ದವರ ಮೇಲೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಕಾರ್ಕಳದ ಬಸ್ ನಿಲ್ದಾಣ ಸಮೀಪ ಇರುವ ಬಾರ್ & ರೆಸ್ಟೋರೆಂಟ್ ಲಾಡ್ಜಿಂಗ್‌ನ ಪ್ಯಾಸೇಜ್‌ಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಜಗದೀಶ್ ಎಂಬಾತ ರೂ. 15,015 ಮೌಲ್ಯದ ಮದ್ಯವನ್ನು ಶೇಖರಿಸಿಕೊಂಡಿದ್ದ ಎಂದು ತಿಳಿದು ಬಂದಿದೆ. ಅದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜಯಪ್ರಕಾಶ್ ಮತ್ತು ಕಟ್ಟಡದ ಲೈಸೆನ್ಸ್‌ದಾರರಾದ ರಾಜೇಶ್ ಶೆಟ್ಟಿ ಅಕ್ರಮ ಮದ್ಯ ಸ್ವಾದೀನತೆ ಹೊಂದಿ ಬಾರ್ ಆ್ಯಂಡ್ ರೆಸ್ಟೊರೆಂಟ್‌ಗೆ ಬರುತ್ತಿದ್ದ ಗ್ರಾಹಕರಿಗೆ ಸರಬರಾಜು ಮಾಡಲು ಅನುವು ಮಾಡಿ ಕೊಟ್ಟಿರುವುದಾಗಿದೆ ಎಂದು ತಿಳಿದು ಬಂದಿದೆ.

ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ (ತನಿಖೆ) ಶಿವಕುಮಾರ್ ಎಸ್ ಆರ್. ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿರುವುದಾಗಿದೆ.



















