ಕಾರ್ಕಳ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳದ ಬೋಳ ಗ್ರಾಮದ ಪಿಲಿಯೂರಪದವು ಎಂಬಲ್ಲಿ ನಡೆದಿದೆ.
ಮೃತರನ್ನು ಸಂತೋಷ್ ಆಚಾರ್ಯ(39) ಎಂದು ಗುರುತಿಸಲಾಗಿದೆ.
ಸಂತೋಷ್ ಅವರ ಪತ್ನಿ ಚೈತ್ರ ಅವರು ತಮ್ಮ ಇಬ್ಬರು ಮಕ್ಕಳ ಜೊತೆಗೆ ತಾಯಿ ಮನೆಗೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅವರಿಗೆ ಸಂತೋಷ್ ಅವರು ಆತ್ಮಹತ್ಯೆ ಮಾಡಿಕೊಂಡಿರುವ ವಿಷಯವನ್ನು ಸೋದರ ಮಾವ ಚಂದ್ರಯ್ಯ ಆಚಾರ್ಯ ಅವರು ಕರೆ ಮಾಡಿ ತಿಳಿಸಿದ್ದಾರೆ.

ಕಾರ್ಕಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.





















