ಉಡುಪಿ: ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಆಶ್ರಯದಲ್ಲಿ ತಾಲೂಕು ಸ್ಟೇಡಿಯಂ ಕಾರ್ಕಳದಲ್ಲಿ ಆಯೋಜಿಸಿದ್ದ 17ರ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ಆರಾಧ್ಯ ಆರ್. ಪಿ. ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ, 9ನೇ ತರಗತಿಯ ಅಭಿಷ್ ಎಸ್. 400ಮೀ. ಓಟದಲ್ಲಿ ಪ್ರಥಮ ಸ್ಥಾನ, 10ನೇ ತರಗತಿಯ ರಿತ್ವಿಕ್ ಆರ್. ಶೆಟ್ಟಿ ಹಾಗೂ 9ನೇ ತರಗತಿಯ ನಿಯತಿ ಶೆಟ್ಟಿಗಾರ್ ತ್ರಿವಿಧ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.






















