ನಡುರಾತ್ರಿ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಖಾದರ್‌

ಔಷಧಿ ವಿಚಾರದಲ್ಲಿ ಸಿಬ್ಬಂದಿ ಮೇಲೆ ಗರಂ

ರಾಮನಗರ: ಆರೋಗ್ಯ ಸಚಿವ ಯು.ಟಿ.ಖಾದರ್‌ ಹೊಸ ಖಾತೆ ಸಿಕ್ಕಿದ ಬಳಿಕ ಫುಲ್‌ ಆಕ್ಟಿವ್‌ ಆಗಿದ್ದಾರೆ. ನಡುರಾತ್ರಿ 2 ಗಂಟೆ ಸುಮಾರಿಗೆ ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಅವರು ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.

ಖಾಸಗಿ ಕಾರ್ಯಕ್ರಮ ನಿಮಿತ್ತ ತಡರಾತ್ರಿ ಚನ್ನಪಟ್ಟಣಕ್ಕೆ ಖಾದರ್‌ ಹೋಗಿದ್ದರು. ಈ ವೇಳೆ ಸಾರ್ವಜನಿಕ ಆಸ್ಪತ್ರೆಯನ್ನು ಪರಿಶೀಲನೆ ನಡೆಸಿದರು. ಜನರಲ್ ವಾರ್ಡ್, ಐಸಿಯು, ಶೌಚಾಲಯವನ್ನು ಪರಿಶೀಲಿಸಿದರು. ಸಿಬ್ಬಂದಿ ಹಾಜರಾತಿ ಪರಿಶೀಲಿಸಿ ವೈದ್ಯರಿಂದ ಮಾಹಿತಿ ಸಂಗ್ರಹಿಸಿದರು.

ಔಷಧಿಯನ್ನು ಹೊರಗಡೆ ಮೆಡಿಕಲ್‌ಗಳಿಗೆ ಬರೆದುಕೊಡುವ ವಿಚಾರಕ್ಕೆ ಸಚಿವರು ಗರಂ ಆದರು. ಇಷ್ಟೆಲ್ಲಾ ಸೌಲಭ್ಯ ಇದ್ದರೂ, ಹೊರಗಡೆ ಯಾಕೆ ಬರೆದು ಕೊಡ್ತೀರಾ ಎಂದು ಸಿಬ್ಬಂದಿಗೆ ತರಾಟೆ ತೆಗೆದುಕೊಂಡರು. ಸಾರ್ವಜನಿಕರಿಗೆ ತೊಂದರೆ ಆಗದಂತೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು.











































error: Content is protected !!
Scroll to Top