ಕಾರ್ಕಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ಕಾರ್ಕಳ, ತಾಲೂಕು ಪಂಚಾಯತ್ ಕಾರ್ಕಳ ಇವರ ವತಿಯಿಂದ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ, ಪೌಷ್ಟಿಕ ಆಹಾರಗಳ ಪ್ರದರ್ಶನ ಹಾಗೂ ಅರಿವು ಕಾರ್ಯಕ್ರಮ ಕುಕ್ಕುಂದೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಗರ್ಭಿಣಿ ಮಹಿಳೆಯರಿಗೆ ಸೀಮಂತ ನೆರವೇರಿಸಲಾಯ್ತು.
ಈ ಸಂದರ್ಭದಲ್ಲಿ ಕಿತ್ತೂರು ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಅಂಗನವಾಡಿ ಕಾರ್ಯಕರ್ತೆ ವಸಂತಿ ಕಾಡಂಬಳ ಅವರನ್ನು ಸನ್ಮಾನಿಸಲಾಯಿತು.

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಲತಾ ಎಸ್. ಕಾರ್ಯಕ್ರಮದ ಕುರಿತು ಪ್ರಾಸ್ತವಿಕ ಮಾತನಾಡಿ ಯೋಜನೆಯ ಉದ್ದೇಶದ ಕುರಿತು ವಿವರಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಡಾ. ವಿಜಯಲಕ್ಷ್ಮಿ ಹೇರೂರು ಇವರು ಉತ್ತಮ ಆರೋಗ್ಯದ ಗರ್ಭಿಣಿ -ಮಕ್ಕಳಿಂದ ಉತ್ತಮ ಸಮಾಜದ ನಿರ್ಮಾಣಸಾಧ್ಯ ಎಂದು ತಿಳಿಸಿದರು.
ಕುಕ್ಕುಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವಿದ್ಯಾರವರು ಆರೋಗ್ಯದ ಕುರಿತು ಮಾಹಿತಿ ನೀಡಿದರು.
ಕುಕ್ಕುಂದೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರದೀಪ್ ಶೆಟ್ಟಿಯವರು ಭಾಗವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಯೋಜನೆಯ ಎಲ್ಲಾ ಮೇಲ್ವಿಚಾರಕಿಯರು, ಸಿಬ್ಬಂಧಿ ವರ್ಗದವರು, ಆಶಾ ಕಾರ್ಯಕರ್ತೆಯರು, ಹಿರ್ಗಾನ ವಲಯದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ತಾಯಂದಿರು ಇನ್ನಿತರರು ಭಾಗವಹಿಸಿದ್ದರು,
ಮೇಲ್ವಿಚಾರಕಿ ಉಮಾ ಅವರು ಸ್ವಾಗತಿಸಿದರು. ಹಿರಿಯ ಮೇಲ್ವಿಚಾರಕಿ ರತಿ ಶೆಟ್ಟಿ ಎ. ನಿರೂಪಿಸಿದರು.
























