ಆರೋಪಿ ದರ್ಶನ್ ವಿರುದ್ಧ ಪ್ರದೋಷ್ ಮಾಫಿ ಸಾಕ್ಷಿ: ವಿಜಯಲಕ್ಷ್ಮೀ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ತೂಗುದೀಪ್ ವಿರುದ್ಧ ಮತ್ತೊಬ್ಬ ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಪರಿಗಣಿಸಿದ್ದು, ಅದನ್ನು ವಜಾ ಮಾಡುವಂತೆ ಕೋರಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಆ ಮೂಲಕ ದರ್ಶನ್‌ಗೆ ಈ ಪ್ರಕರಣದಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ.

ವಕೀಲ ನಾಗಮುತ್ತು ವಾದ ಮಂಡಿಸಿ, ’59ನೇ ಸಿವಿಲ್ ಕೋರ್ಟ್ ನೀಡಿದ ಆದೇಶವು ಸುಪ್ರೀಂ ಕೋರ್ಟ್‌ನ ತೀರ್ಪುಗಳಿಗೆ ವಿರುದ್ಧವಾಗಿದೆ. ಪ್ರದೋಷ್‌ನನ್ನು ಮಾಫಿ ಸಾಕ್ಷಿ ಮಾಡುವ ಮುನ್ನ ಸಿಆರ್‌ಪಿಸಿ 164 ಅಡಿಯಲ್ಲಿ ಯಾವುದೇ ಹೇಳಿಕೆ ಪಡೆದಿಲ್ಲ. ಸಹ ಆರೋಪಿಗಳಿಗೆ ಮಾಹಿತಿ ನೀಡದೆ, ಅಂಧಕಾರದಲ್ಲಿಟ್ಟು ಮಾಫಿ ಸಾಕ್ಷಿ ಅರ್ಜಿ ಸಲ್ಲಿಸಲಾಗಿದೆ’ ಎಂದು ಕೋರ್ಟ್‌ನಲ್ಲಿ ವಾದಿಸಿದ್ದರು.

ವಾದ ಆಲಿಸಿದ ಸುಪ್ರೀಂ ಕೋರ್ಟ್‌ ಪೀಠ, ಪ್ರದೋಷ್‌ನನ್ನು ಮಾಫಿ ಸಾಕ್ಷಿಯಾಗಿ ಏಕೆ ಪರಿಗಣಿಸಬಾರದು?, ಅವರು ಏನು ಹೇಳುತ್ತಾರೆ ಎಂಬುದು ನಮಗೆ ಗೊತ್ತಿಲ್ಲ. ಪ್ರದೋಷ್ ಪರ ವಕೀಲರೇ ಮಾಫಿ ಸಾಕ್ಷಿ ಅರ್ಜಿ ಸಲ್ಲಿಸಿದ್ದಾರಲ್ಲವೇ? ಅದನ್ನು ಹೈಕೋರ್ಟ್ ಎತ್ತಿಹಿಡಿದಿದೆಯಲ್ಲವೇ?’ ಎಂದು ಪ್ರಶ್ನಿಸಿ ಅರ್ಜಿ ವಜಾ ಮಾಡಿದೆ.

ನ್ಯಾ. ಜೆ.ಬಿ.ಪರ್ದಿವಾಲಾ, ನ್ಯಾ. ಕೆ.ವಿನೋದ್ ಚಂದ್ರನ್ ಅವರಿರುವ ಪೀಠ ವಿಚಾರಣೆ ನಡೆಸಿ ಹೈಕೋರ್ಟ್ ನೀಡಿದ ತೀರ್ಪನ್ನು ಎತ್ತಿ ಹಿಡಿದಿದೆ.

















































error: Content is protected !!
Scroll to Top