ಕ್ರೈಸ್ಟ್‌ಕಿಂಗ್: ಧ್ಯಾನ ಮತ್ತು ಏಕಾಗ್ರತೆ ತರಬೇತಿ

ಕಾರ್ಕಳ: ಇಲ್ಲಿನ ಕ್ರೈಸ್ಟ್‌ಕಿಂಗ್ ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ಧ್ಯಾನ ಮತ್ತು ಏಕಾಗ್ರತೆ ಎಂಬ ವಿಷಯದಲ್ಲಿ ತರಬೇತಿ ಮತ್ತು ಮಾಹಿತಿ ಕಾರ್ಯಕ್ರಮ ನಡೆಯಿತು.

ಬೆಂಗಳೂರಿನ ಅರೋಹ ಸ್ಪೇಸ್ ಅಕಾಡೆಮಿಯ ಯೋಗ ತರಬೇತುದಾರೆ ಪ್ರಿಯಾ ಕೆ.ವಿ. ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, “ನಮ್ಮ ಮನಸ್ಸಿನಲ್ಲಿ ಹುದುಗಿರುವ ಋಣಾತ್ಮಕ ಆಲೋಚನೆಗಳನ್ನು ದೂರ ಮಾಡಿ ಧನಾತ್ಮಕ ಚಿಂತನೆಗಳನ್ನು ನಮ್ಮಲ್ಲಿ ಬೆಳೆಸಿ ಜೀವನದಲ್ಲಿ ಯಶಸ್ಸನ್ನು ಸಾಧಿಸುವಲ್ಲಿ ಧ್ಯಾನ ಅತೀ ಮುಖ್ಯ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳಾದ ನೀವು ನಿರಂತರ ಧ್ಯಾನವನ್ನು ಮಾಡಿ ಕ್ರೀಯಾಶೀಲ ವ್ಯಕ್ತಿತ್ವವನ್ನು ನಿಮ್ಮಲ್ಲಿ ಬೆಳೆಸಿಕೊಳ್ಳಿ.” ಎಂದು ಹೇಳಿದರು.

ನಂತರ ವಿದ್ಯಾರ್ಥಿಗಳಿಗೆ ಧ್ಯಾನ ತರಬೇತಿ ನಡೆಯಿತು.

ಸಂಸ್ಥೆಯ ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಜೋಸ್ನಾ ಸ್ನೇಹಲತಾ ಉಪಸ್ಥಿತರಿದ್ದರು.

ಪ್ರೌಢಶಾಲಾ ವಿಭಾಗದ ಶಿಕ್ಷಕಿ ರೇಖಾ ಸಂತೋಷ್ ಕಾರ್ಯಕ್ರಮ ನಿರ್ವಹಿಸಿದರು.

















































error: Content is protected !!
Scroll to Top