ಕೊರಿಯರ್‌ನಲ್ಲಿ ‌ಡ್ರಗ್ಸ್ ಸಾಗಾಟ, ಮಾರಾಟ : ಆರೋಪಿಗಳ ಬಂಧನ

ಮಂಗಳೂರು: ಕೊರಿಯರ್‌ನಲ್ಲಿ ಡ್ರಗ್ಸ್ ಎಂಡಿಎಂಎ ಯನ್ನು ಮಂಗಳೂರಿಗೆ ಸಾಗಿಸಿ ನಗರ ಮತ್ತು ನೆರೆಯ ರಾಜ್ಯ ಕೇರಳದಲ್ಲಿ ಮಾರಾಟಕ್ಕೆ ಸಂಚು ರೂಪಿಸಿದ್ದ ತಂಡವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದಾರೆ.

ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಮಂಗಳಾಡಿ ಸಮೀಪದ ಬೈದಲಾ ನಿವಾಸಿ ಅಬ್ದುಲ್ ಹಾಪೀಲ್ (25), ಮಂಗಳೂರಿನ ಕೂಳೂರು ಕಸಬಾ ಬೆಂಗ್ರೆಯ ಜಿಯಾವುಲ್ ಹಕ್ (30) ಹಾಗೂ ಮಂಗಳೂರಿನ ಪಾಂಡೇಶ್ವರದ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಅಲ್ತಾಫ್ (28) ಎಂದು ಗುರುತಿಸಲಾಗಿದೆ.

ಬಂಧಿತರಿಂದ , ₹1.58 ಕೋಟಿ ಮೌಲ್ಯದ 1 ಕೆಜಿ 796.96 ₹1.63 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಉಳ್ಳಾಲ ತಾಲೂಕು ಕುಂಪಲದ ಡಿಮಾರ್ಟ್ ಸಮೀಪ ಅ. 8ರಂದು ರಾತ್ರಿ 10 ಗಂಟೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಮಾದಕವಸ್ತು ಮಾರಾಟದ ಆರೋಪದಡಿ ಮೂವರನ್ನು ಬಂಧಿಸಿರುವುದಾಗಿದೆ.

ಬಂಧಿತ ಆರೋಪಿಗಳಿಂದ 1 kg 796.96 ಗ್ರಾಂ ಎಂಡಿಎಂಎ, ಮೂರು ಮೊಬೈಲ್ ಫೋನ್‌ಗಳು, ಮಾದಕವಸ್ತು ಸಾಗಾಟಕ್ಕೆ ಬಳಸಿದ್ದ ಮಾರುತಿ ಸುಜುಕಿ ಸ್ವಿಫ್ಟ್ ಕಾರು, ಆಟೊ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಹಾಗೂ ವಾಟರ್ ಪ್ಯೂರಿಫೈಯರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹1,63,84,000 ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಪಂಜಾಬಿನ ಅಮೃತಸರದಿಂದ ಎಂಡಿಎಂಎ ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್‌ನ ನೀರು ಸಂಗ್ರಹಿಸುವ ಭಾಗದಲ್ಲಿ ಅಡಗಿಸಿಟ್ಟು ಕೋರಿಯ‌ರ್ ಮೂಲಕ ಮಂಗಳೂರಿಗೆ ಕಳುಹಿಸಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಬಳಿಕ ಮಾದಕವಸ್ತುವನ್ನು ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಿಗೆ ಪೂರೈಸಿ ಮಾರಾಟ ಮಾಡಲು ಯೋಜಿಸಿದ್ದರು.

ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

















































error: Content is protected !!
Scroll to Top