ಬೆಂಗಳೂರು: ರಾಜ್ಯದ ಹಲವೆಡೆ ಐಸ್‌ಕ್ರೀಂ ಸೆಂಟರ್‌ಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆ ನಡೆಸಿದ್ದು, ಹಲವಾರು ಲೋಪಗಳು ಕಂಡುಬಂದಿವೆ.
ಆರೋಗ್ಯ ಸಚಿವ ಯು.ಟಿ.ಖಾದರ್ ಸೂಚನೆ ಮೇರೆಗೆ ನಡೆದ ಈ ತಪಾಸಣೆಯಲ್ಲಿ ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಆಹಾರ ಪದಾರ್ಥಗಳ ಗುಣಮಟ್ಟ, ಅವಧಿ ಮುಗಿದ ಸಾಮಗ್ರಿಗಳ ಬಳಕೆ, ಪ್ಯಾಕೆಟ್‌ಗಳ ಮೇಲಿನ ಲೇಬಲ್‌ಗಳು ಹಾಗೂ ಸ್ವಚ್ಛತಾ ವ್ಯವಸ್ಥೆಗಳನ್ನು ಪರಿಶೀಲಿಸಲಾಗಿದೆ. ರಾಜ್ಯದಲ್ಲಿ ಐಸ್‌ಕ್ರೀಂ ತಯಾರಿಕಾ ಘಟಕಗಳ ಗುಣಮಟ್ಟ ಮತ್ತು ಸ್ವಚ್ಛತೆಯನ್ನು ಪರಿಶೀಲಿಸುವ ಉದ್ದೇಶದಿಂದ ಅಧಿಕಾರಿಗಳು ಸುಮಾರು 45 ಘಟಕಗಳ ಮೇಲೆ ದಾಳಿ ನಡೆಸಿದ್ದಾಗಿ ತಿಳಿದು ಬಂದಿದೆ.
ಬೆಂಗಳೂರು, ಮೈಸೂರು, ರಾಯಚೂರುಗಳಲ್ಲಿನ ಹಲವು ಐಸ್‌ಕ್ರೀಂ ಸೆಂಟರ್‌ಗಳಲ್ಲಿ ಲೇಬಲ್ ಸೇರಿದಂತೆ ವಿವಿಧ ಲೋಪಗಳು ಕಂಡುಬಂದಿದೆ ಎಂದು ತಿಳಿದು ಬಂದಿದೆ. ಐಸ್‌ಕ್ರೀಂ, ಹಾಲು, ಹಾಲಿನ ಪುಡಿ, ಸಕ್ಕರೆ ಮತ್ತು ವಿವಿಧ ಪ್ಲೇವರ್ ಪದಾರ್ಥಗಳು ಸೇರಿದಂತೆ ಸುಮಾರು 70 ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಪರೀಕ್ಷಾ ವರದಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.










































