ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನ ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ ಮಾಡಿರುವುದಾಗಿ ಸಿ ಎಂ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಡುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಜೆವಾರ್‌ನಲ್ಲಿ ನಿರ್ಮಾಣವಾಗಿರುವ ಈ ವಿಮಾನ ನಿಲ್ದಾಣ ಉತ್ತರ ಪ್ರದೇಶಕ್ಕೆ ಪ್ರಧಾನಿ ನೀಡಿದ ಮಹತ್ವದ ಕೊಡುಗೆ ಎಂದು ತಿಳಿಸಿದ್ದಾರೆ.
ವಿಮಾನ ನಿಲ್ದಾಣ ಕೊಡುಗೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉತ್ತರ ಪ್ರದೇಶದ ಸಚಿವ ಸಂಪುಟ ಕೃತಜ್ಞತೆ ಸಲ್ಲಿಸುತ್ತದೆ. ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ನೋಯ್ತಾ-ಜೆವಾರ್’ ಎಂದು ಹೆಸರಿಡುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದಿದ್ದಾರೆ.

ಈ ವಿಮಾನ ನಿಲ್ದಾಣವು ಮುಂದಿನ ದಿನಗಳಲ್ಲಿ ಉತ್ತರ ಪ್ರದೇಶದ ಅತಿದೊಡ್ಡ ವಿಮಾನ ನಿಲ್ದಾಣವಾಗಿ ಬೆಳೆಯುವುದರ ಜೊತೆಗೆ ದೇಶದ ಪ್ರಮುಖ ವಾಯುಯಾನ ಕೇಂದ್ರವಾಗಲಿದೆ ಎಂದು ಅವರು ವಿಶ್ವಾಸ ಹೇಳಿದ್ದಾರೆ.
























