ಬೆಂಗಳೂರು: ನಿವೃತ್ತಿಗೆ ಆರು ತಿಂಗಳು ಉಳಿದಿರುವಾಗಲೇ ಕೆಎಸ್‌ಆರ್‌ಪಿಯ ಎಡಿಜಿಪಿಯಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಎಸ್. ರವಿ ಅವರು ದಿಢೀರ್ ರಾಜೀನಾಮೆ ಸಲ್ಲಿಸಿದ್ದು, ಅವರ ಈ ನಡೆ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
1998ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಎಸ್. ರವಿ ಅವರು ಪೊಲೀಸ್ ಮಹಾನಿರ್ದೇಶಕರ (ಡಿಜಿ ಮತ್ತು ಐಜಿಪಿ) ಕಚೇರಿಗೆ ರಾಜೀನಾಮೆ ಸಲ್ಲಿಸಿದ್ದು, ಅದರಲ್ಲಿ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿದ್ದಾರೆ. ಈ ಬೆಳವಣಿಗೆಯನ್ನು ಡಿಜಿ ಮತ್ತು ಐಜಿಪಿ ಸಲೀಂ ಅವರು ದೃಢಪಡಿಸಿದ್ದಾರೆ.
ಹಿರಿಯ ಅಧಿಕಾರಿ ಜೊತೆಗಿನ ಮನಸ್ತಾಪದಿಂದ ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.






































