ಕಾರ್ಕಳ: ಶ್ರೀ ವೆಂಕಟರಮಣ ಪ್ರಥಮ ದರ್ಜೆ ಕಾಲೇಜಿನಲ್ಲಿ ಯೂತ್ ರೆಡ್ ಕ್ರಾಸ್ ಘಟಕದ ಉದ್ಘಾಟನೆ ನಡೆಯಿತು.
ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಕಾರ್ಯದರ್ಶಿ ಗಣನಾಥ ಶೆಟ್ಟಿ ಎಕ್ಕಾರು ದೀಪ ಬೆಳಗಿಸಿ ಉದ್ಘಾಟಿಸಿದರು. ರೆಡ್ ಕ್ರಾಸ್ ಸಂಸ್ಥೆಯ ಹುಟ್ಟು, ಬೆಳವಣಿಗೆ, ಗುರಿ, ಮಹತ್ವವನ್ನು ತಿಳಿಸಿ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.
ಪ್ರಾಂಶುಪಾಲೆ ಪ್ರೊ|ಗೀತಾ ಜಿ. ಅಧ್ಯಕ್ಷತೆ ವಹಿಸಿದ್ದರು. ರೆಡ್ ಕ್ರಾಸ್ ಯೋಜನಾಧಿಕಾರಿ ಸೋನಾ ಸ್ವಾಗತಿಸಿದರು. ಕಸಹನಾ ಕಾರ್ಯಕ್ರಮ ನಿರೂಪಿಸಿ, ಸ್ವಾತಿ ವಂದಿಸಿದರು.






































