ಕಾರ್ಕಳ: ಕರ್ನಾಟಕ ಸರ್ಕಾರದ ನಿರ್ದೇಶನದಂತೆ ಪ್ರತಿ ತಿಂಗಳ ಎಲ್ಲಾ ಶನಿವಾರಗಳಂದು ನಡೆಯುವ ಪ್ರಜಾಸೇವೆ ಆಂದೋಲನವು ಅ. 17 ರ ಪೂರ್ವಾಹ್ನ 10 ಗಂಟೆಗೆ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಬಜಗೋಳಿಯಲ್ಲಿ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ, ಶಾಸಕರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಈ ಆಂದೋಲನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ವಿನಂತಿಸಲಾಗಿದೆ.







































