ಕಾರ್ಕಳ : ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತ್ ಉಡುಪಿ ಇವರ ವತಿಯಿಂದ ಬೆಳ್ವೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರಾಥಮಿಕ ವಿಭಾಗದ 14ರ ವಯೋಮಿತಿಯ ಮೈಸೂರು ವಿಭಾಗ ಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳ ಕ್ರೈಸ್ಟ್ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ತಂಡವನ್ನು ಏಳನೇ ತರಗತಿಯ ತ್ರಿಷ್ಮ, ಸೃಷ್ಟಿ ಎಸ್. ಪೂಜಾರಿ, ಕೇಟ್ಲಿನ್ ಏಂಜಲ್ ಪಿಂಟೊ, ಎಲ್ಸ ರುಬೇಲ್ ಡಿಸೋಜಾ, ಪ್ರನ್ವಿ ಎಸ್. ದೇವಾಡಿಗ ಹಾಗೂ ಆರನೇ ತರಗತಿಯ ನಿಶಾ ಡಿಸೋಜಾ, ಅಲಿಶಾ ಡಿಸೋಜಾ ಪ್ರತಿನಿಧಿಸಿದ್ದರು. ಇವರಲ್ಲಿ ತ್ರಿಷ್ಮ ಬೆಸ್ಟ್ ಅಟ್ಯಾಕರ್ ಹಾಗೂ ನಿಶಾ ಡಿಸೋಜಾ ಬೆಸ್ಟ್ ಪಾಸರ್ ಪ್ರಶಸ್ತಿ ಪಡೆದುಕೊಂಡರು. ಅಪೂರ್ವ ಸಾಧನೆಗೈದ ವಿದ್ಯಾರ್ಥಿನಿಯರನ್ನು ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯಸ್ಥರು, ಶಿಕ್ಷಕರು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.






































