ಕರ್ನಾಟಕದ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅಧಿಕಾರ ಸ್ವೀಕರಿಸಿದ್ದಾರೆ.

ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಬ್ರು ಅವರು ಸುಧಾ

ಕರ್ನಾಟಕದ ರಾಜ್ಯಪಾಲರಾಗಿದ್ದ ಥಾವರ್‌ಚಂದ್ ಗೆಹೋಟ್ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು ಅವರು ಡಾ. ಸುಧಾ ಯಾದವ್ ಅವರನ್ನು ಕರ್ನಾಟಕದ ರಾಜ್ಯಪಾಲರಾಗಿ ನೇಮಕ ಮಾಡಿದ್ದರು. ಕರ್ನಾಟಕದ ರಾಜ್ಯಪಾಲರ ಹುದ್ದೆ ಅಲಂಕರಿಸಿದ ಎರಡನೇ ಮಹಿಳೆ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ. ಈ ಹಿಂದೆ ವಿ.ಎಸ್. ರಮಾದೇವಿ ಅವರು 1999ರಿಂದ 2002ರವರೆಗೆ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.











































































error: Content is protected !!
Scroll to Top