ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು

ನವದೆಹಲಿ: ಬಿಜೆಪಿಯ ಹಿರಿಯ ನಾಯಕ, ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ(98) ಅವರನ್ನು ಅನಾರೋಗ್ಯ ಹಿನ್ನೆಲೆ ನವದೆಹಲಿಯ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎದೆ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಶುಕ್ರವಾರ ಸಂಜೆ ಆಸ್ಪತ್ರೆಗೆ ದಾಖಲು ಮಾಡಿರುವುದಾಗಿದೆ. ಅಡ್ವಾಣಿ ಅವರನ್ನು ಆಸ್ಪತ್ರೆಯ ಶ್ವಾಸಕೋಶ ಚಿಕಿತ್ಸಾ ವಿಭಾಗಕ್ಕೆ ದಾಖಲಿಸಲಾಗಿದ್ದು, ವೈದ್ಯರ ತಂಡದ ನಿಗಾದಲ್ಲಿ ಇರಿಸಲಾಗಿದೆ. ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಲು ಅಗತ್ಯ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಳೆದ ಮೇ ತಿಂಗಳಿನಲ್ಲಿಯೂ ವಯೋಸಹಜ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಅಡ್ವಾಣಿ ಅವರು ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲವು ದಿನಗಳ ಚಿಕಿತ್ಸೆ ಬಳಿಕ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು.













































































error: Content is protected !!
Scroll to Top