ಸವಣೂರು: ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಪರಣೆಯ ವ್ಯಕ್ತಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಸಮೀಪದ ಕಾಡಿನಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
ಸುರೇಶ್ ಎಂಬವರೇ ಮೃತಪಟ್ಚಿರುವ ವ್ಯಕ್ತಿ.
ಸುರೇಶ್ ಅವರು ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದರು. ಈ ಸಂಬಂಧ ಕುಟುಂಬಸ್ಥರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅವರ ಶವ ಸಮೀಪದ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವಿನ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.








































