ಜಾನಪದ ಕ್ಷೇತ್ರದ ಸಾಧಕ ದೈವ ನರ್ತಕ ದೇಜು ಪಾಣಾರ ಅವರಿಗೆ ಕಾರ್ಕಳ ತಾಲೂಕು ಸಾಹಿತ್ಯ ಸಮ್ಮೇಳನ ಪ್ರಶಸ್ತಿ

ಕಾರ್ಕಳ: ದೇಜು ಪಾಣಾರ ಅವರು ಕಾರ್ಕಳ ತಾಲೂಕು ಸಾಹಿತ್ಯ ಸಮ್ಮೇಳನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕಾರ್ಕಳದ ಬೈಲೂರು ಕೌಡೂರು ಗ್ರಾಮದ ಎಲಿಯಾಳದವರಾದ ದೇಜು ಪಾಣಾರ ಅವರು ದೈವ ನರ್ತಕರಾಗಿದ್ದು, ಜಾನಪದ ಕ್ಷೇತ್ರದಲ್ಲಿ ಸಾಧನೆಗೈದ ಅವರನ್ನು ಗುರುತಿಸಿ ಕಾರ್ಕಳ ತಾಲೂಕು ಸಾಹಿತ್ಯ ಸಮ್ಮೇಳನದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೂ ಅಪಾರ ಕೊಡುಗೆ ನೀಡಿರುವ ಇವರು ಉಡುಪಿ, ದಕ್ಷಿಣ ಕನ್ನಡ ಭಾಗಗಳಲ್ಲಿ ದೈವ ನರ್ತನಕ್ಕೆ ಸಂಬಂಧಿಸಿದಂತೆ ಪ್ರಸಿದ್ಧರು.

ನವೆಂಬರ್ 7 ರಂದು ಕಾರ್ಕಳದ ಪ್ರತಿಷ್ಠಿತ ರಾಜೇಶ್ವರಿ ಶಿಕ್ಷಣ ಸಂಸ್ಥೆಯಲ್ಲಿ ಜರಗಲಿರುವ ಕಾರ್ಕಳ ತಾಲೂಕು 22 ನೇ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಕಾರ್ಕಳ ತಾಲೂಕು ಸಾಹಿತ್ಯ ಪರಿಷತ್ ಘಟಕವು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.





























































































































error: Content is protected !!
Scroll to Top