ನವೀನ ಕೆ. ಇನ್ನಾ ಅವರಿಗೆ ಕಾರ್ಕಳ ತಾಲೂಕು ಸಾಹಿತ್ಯ ಸಮ್ಮೇಳನ ಪ್ರಶಸ್ತಿ ಪ್ರಕಟ

ಕಾರ್ಕಳ: ನವೀನ ಕೆ. ಇನ್ನಾ ಅವರು ಕಾರ್ಕಳ ತಾಲೂಕು ಸಾಹಿತ್ಯ ಸಮ್ಮೇಳನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮೂಲತಃ ಕಾರ್ಕಳ ತಾಲೂಕು ಇನ್ನಾ ಗ್ರಾಮದ ಬೈಲುಮನೆ ಯವರಾಗಿದ್ದು ಇದೀಗ ಮುಂಬೈಯಲ್ಲಿ ಕರ್ನಾಟಕ ಮಲ್ಲ ಪತ್ರಿಕೆಯ ಹಿರಿಯ ವರದಿಗಾರರಾಗಿರುವ ನವೀನ್ ಕೆ. ಇನ್ನಾ ಅವರ ಪತ್ರಿಕಾರಂಗ ಮತ್ತು ಸಾಮಾಜಿಕ ಸೇವೆಯನ್ನು ಗುರುತಿಸಿ ಅವರನ್ನು ಕಾರ್ಕಳ ತಾಲೂಕು ಸಾಹಿತ್ಯ ಸಮ್ಮೇಳನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ನವೆಂಬರ್ 7 ರಂದು ಕಾರ್ಕಳದ ರಾಜೇಶ್ವರಿ ಶಿಕ್ಷಣ ಸಂಸ್ಥೆಯಲ್ಲಿ ಜರಗಲಿರುವ ಕಾರ್ಕಳ ತಾಲೂಕು 22 ನೇ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಕಾರ್ಕಳ ತಾಲೂಕು ಸಾಹಿತ್ಯ ಪರಿಷತ್ ಘಟಕವು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.















































































error: Content is protected !!
Scroll to Top