ಗ್ವಾಲಿಯರ್‌ನಲ್ಲಿ ನಡೆಯುವ ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಅಮೃತಭಾರತಿ ಪಿಯು ಕಾಲೇಜಿನ ಅವನಿ ಕೆ. ಆಯ್ಕೆ

ಹೆಬ್ರಿ: ಪಿ.ಆರ್.ಎನ್. ಅಮೃತಭಾರತಿ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅವನಿ ಕೆ. ಅವರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆಯಲಿರುವ ವಿದ್ಯಾಭಾರತಿ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.

ಕ್ರೀಡಾ ಕ್ಷೇತ್ರದಲ್ಲಿ ತಮ್ಮ ಪ್ರತಿಭೆಯನ್ನು ರಾಷ್ಟ್ರಮಟ್ಟದಲ್ಲಿ ಪ್ರದರ್ಶಿಸಲು ಅವಕಾಶ ಪಡೆದಿರುವ ಅವನಿ ಅವರ ಸಾಧನೆಯು ಕಾಲೇಜಿಗೆ ಹೆಮ್ಮೆ ತಂದಿದೆ. ಶೈಕ್ಷಣಿಕ ಪ್ರಗತಿಯೊಂದಿಗೆ ಕ್ರೀಡೆಗೂ ಆದ್ಯತೆ ನೀಡುವ ಅಮೃತಭಾರತಿ ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ನಿರಂತರ ಪ್ರೋತ್ಸಾಹ ನೀಡುತ್ತಿದೆ.

ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸುವ ಅಮೃತಭಾರತಿ ಶಿಕ್ಷಣ ಸಂಸ್ಥೆಯ ಪ್ರಯತ್ನಕ್ಕೆ ಅವನಿ ಅವರ ಆಯ್ಕೆ ಮತ್ತೊಂದು ಹೆಮ್ಮೆಯ ಸಂಗತಿಯಾಗಿದೆ. ಅವನಿ ಅವರ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ. ಗ್ವಾಲಿಯರ್‌ನಲ್ಲಿ ನಡೆಯಲಿರುವ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಯಶಸ್ಸು ಗಳಿಸಿ ಸಂಸ್ಥೆಗೆ ಮತ್ತಷ್ಟು ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.















































































error: Content is protected !!
Scroll to Top