ಆರ್‌ಜಿಯುಎಚ್‌ಎಸ್ ಮಂಗಳೂರು ವಲಯ ಕಬಡ್ಡಿ ಪಂದ್ಯಾಟ: ಆಳ್ವಾಸ್ ಚಾಂಪಿಯನ್

ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (ಆರ್‌ಜಿಯುಎಚ್‌ಎಸ್) ಮಂಗಳೂರು ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಆಳ್ವಾಸ್ ಅಲೈಡ್ ಹೆಲ್ತ್ ಸೈನ್ಸಸ್ ಕಾಲೇಜು ಚಾಂಪಿಯನ್ ಆಗಿ ಹೊರಹೊಮ್ಮಿತು.

ತಲಪಾಡಿಯ ಶಾರದಾ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ನಡೆದ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಳ್ವಾಸ್ ತಂಡವು ಎಸ್‌ಡಿಎಂ ಕಾಲೇಜ್ ಆಫ್ ನ್ಯಾಚುರೋಪಥಿ ತಂಡವನ್ನು 34–16 ಅಂಕಗಳ ಅಂತರದಿಂದ ಸೋಲಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಆರಂಭದಿಂದಲೇ ಉತ್ತಮ ಆಟ ಪ್ರದರ್ಶಿಸಿದ ಆಳ್ವಾಸ್ ತಂಡವು ಸಂಘಟಿತ ದಾಳಿ, ಪರಿಣಾಮಕಾರಿ ರಕ್ಷಣಾ ತಂತ್ರ ಹಾಗೂ ಉತ್ತಮ ತಂಡದ ಹೊಂದಾಣಿಕೆಯ ಮೂಲಕ ಎದುರಾಳಿ ತಂಡದ ಮೇಲೆ ಮೇಲುಗೈ ಸಾಧಿಸಿತು.

ವಿಜೇತ ತಂಡದ ಸದಸ್ಯರನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

















































































error: Content is protected !!
Scroll to Top