ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ-ಪಾಲಕರ ಸಭೆ

ಕಾರ್ಕಳ: ವಿದ್ಯಾರ್ಥಿಗಳ ಶೈಕ್ಷಣಿಕ ಯಶಸ್ಸಿನ ಹಾದಿಗೆ ಸೂಕ್ತ ಮಾರ್ಗದರ್ಶನ ಮತ್ತು ಸಮಯಪರಿಪಾಲನೆಯ ಉದ್ದೇಶದಿಂದ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ PCMB ವಿಭಾಗದ ವಿದ್ಯಾರ್ಥಿಗಳ ಶಿಕ್ಷಕ- ಪಾಲಕರ ಸಭೆ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಅಶ್ವತ್ ಎಸ್. ಎಲ್. ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಆಸಕ್ತಿಗೆ ತಕ್ಕಂತೆ ಉನ್ನತ ಶಿಕ್ಷಣದ ಆಯ್ಕೆಗಳನ್ನು ಗುರುತಿಸಿಕೊಂಡು ತಮ್ಮ ಗುರಿ ಸಾಧನೆಯತ್ತ ಆತ್ಮವಿಶ್ವಾಸದಿಂದ ಹೆಜ್ಜೆ ಇಟ್ಟು ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ತಿಳಿಸಿದರು.

ಕಾಲೇಜಿನ ಸಹಸಂಸ್ಥಾಪಕ ಪ್ರಾಂಶುಪಾಲ ವಿದ್ವಾನ್ ಗಣಪತಿ ಭಟ್ ಮಾತನಾಡಿ, ಇಂದಿನ ಆಧುನಿಕ ಕಾಲಘಟ್ಟದಲ್ಲಿ ಮಕ್ಕಳ ಮನಸ್ಥಿತಿಯ ಬಗ್ಗೆ ನಾವು ಅರಿತುಕೊಳ್ಳದೆ ಹೋದರೆ ನಮ್ಮ ಉದ್ದೇಶ ಈಡೇರದು. ಮಾತ್ರವಲ್ಲದೆ ವಿದ್ಯಾರ್ಥಿಗಳು ತಮ್ಮ ಕನಸನ್ನು ಈಡೇರಿಸಿಕೊಳ್ಳುವಲ್ಲಿ ಗುರು ಮತ್ತು ತಂದೆ ತಾಯಿಯ ಪಾತ್ರ ಪ್ರಮುಖವಾದುದು ಎಂದು ತಿಳಿಸಿದರು.

ಸಹ ಸಂಸ್ಥಾಪಕ ಗಣನಾಥ ಶೆಟ್ಟಿ ಬಿ. ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾದರೆ ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಅತಿ ಮುಖ್ಯ. ಇದರ ಜೊತೆಗೆ ಗುರು ಹಾಗೂ ಪೋಷಕರು ಶ್ರಮಿಸಿದ್ದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ತಿಳಿಸಿದರು.

ಮತ್ತೋರ್ವ ಸಹ ಸಂಸ್ಥಾಪಕ ಗಣಪತಿ ಭಟ್ ಕೆ.ಎಸ್. ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಅಂಕಗಳ ಗಳಿಕೆಯೊಂದೇ ಯಶಸ್ಸಿನ ಮಾನದಂಡವಲ್ಲ. ಸಂವಹನ ಕೌಶಲ್ಯ, ಆತ್ಮವಿಶ್ವಾಸ, ನಾಯಕತ್ವ ಗುಣ,ಸಮಸ್ಯೆ ಪರಿಹರಿಸುವ ಸಾಮರ್ಥ್ಯ ಮತ್ತು ವೈಜ್ಞಾನಿಕ ಮನೋಭಾವವನ್ನು ವಿದ್ಯಾರ್ಥಿಗಳು ಹೊಂದುವುದು ಅತಿ ಮುಖ್ಯ ಎಂದರು.

ಆಂಗ್ಲ ಭಾಷ ಉಪನ್ಯಾಸಕ ರಾಜೇಶ್ ಶೆಟ್ಟಿ, ಪೋಷಕರು ವರ್ಗದವರು ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಉಪಸ್ಥಿತರಿದ್ದರು.

ಕನ್ನಡ ವಿಭಾಗದ ಉಪನ್ಯಾಸಕ ವರುಣ್ ವಾಲಿ ನಿರೂಪಿಸಿದರು.

















































































error: Content is protected !!
Scroll to Top