ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳಿಬ್ಬರು ಕಾಪು ಪೊಲೀಸರ ವಶಕ್ಕೆ

ಉಡುಪಿ: ಕಾಪು ಬೀಚ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ₹2.85 ಲಕ್ಷ ಮೌಲ್ಯದ 5.710 ಕೆ.ಜಿ. ಗಾಂಜಾ ಸೇರಿದಂತೆ ನಗದು ಮತ್ತು ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಳಪು ಗ್ರಾಮದ ವಿನಯನಗರ ನಿವಾಸಿ ಆರೀಫ್ (38) ಹಾಗೂ ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದ ಹೂಡೆ ನಿವಾಸಿ ಅಕೀಫ್ (34) ಎಂಬವರೇ ಬಂಧಿತ ಆರೋಪಿಗಳು.

ಉಳಿಯಾರಗೋಳಿ ಗ್ರಾಮದ ಯಾರ್ಡ್ ಬೀಚ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮಧ್ಯಾಹ್ನ 12.0ಜ5ರ ಸುಮಾರಿಗೆ ನಡೆದ ಕಾರ್ಯಾಚರಣೆಯಲ್ಲಿ ಆರೋಪಿಗಳು ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ತಮ್ಮ ವಶದಲ್ಲಿಟ್ಟುಕೊಂಡಿರುವುದು ಪತ್ತೆಯಾಗಿದೆ. ಆಂಧ್ರಪ್ರದೇಶದ ಹೈದರಾಬಾದ್‌ನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದುದಾಗಿ ವಿಚಾರಣೆ ವೇಳೆ ಬಹಿರಂಗ ಪಡಿಸಿದ್ದಾರೆ. ಇಬ್ಬರೂ ಈ ಹಿಂದೆಯೂ ವಿವಿಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸಿದ್ದಾಗಿ ತಿಳಿದು ಬಂದಿದೆ.

















































































error: Content is protected !!
Scroll to Top