ಕಾರ್ಕಳ: ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ (ಆಡಳಿತ) ಉಡುಪಿ ಜಿಲ್ಲೆ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಕ್ಕರ್ಣೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ2026-27 ರಲ್ಲಿ ಮಟ್ಟದ ಆಟೋಟ ಸ್ಪರ್ಧೆಯಲ್ಲಿ ಎಸ್.ವಿ.ಟಿ.ಪದವಿಪೂರ್ವ ಕಾಲೇಜು ಕಾರ್ಕಳದ ಕನ್ನಡ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿಯ ಸಮೀಕ್ಷಾ ಮೂರು ಕಿಲೋಮೀಟರ್ ನಡಿಗೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸಾಧನೆಗೈದ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು, ಹಿರಿಯ ಸಹ ಶಿಕ್ಷಕರು, ಅಧ್ಯಾಪಕ , ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿರುತ್ತಾರೆ.
ಇವರು ಕಾರ್ಕಳ ಶಿವತಿಕೆರೆ ನಿವಾಸಿ ಆಶಾ – ಚಂದಯ್ಯ ದೇವಾಡಿಗ ಅವರ ಪುತ್ರಿ.










































