ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಕಾರ್ಕಳ: ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತಪಟ್ಟ ಘಟನೆ ಅ.28ರ ಬೆಳಗ್ಗೆ ನಡೆದಿದೆ.

ಮೃತ ಬಾಲಕಿಯನ್ನು ಬಾಗಲಕೋಟೆ ಮೂಲದ ಮೇಘನಾ (13) ಎಂದು ಗುರುತಿಸಲಾಗಿದೆ.

ಬುಧವಾರ ಬೆಳಗ್ಗೆ ಸುಮಾರು 6 ಗಂಟೆಗೆ ಬಾಲಕಿ ಮೂರ್ಛೆ ತಪ್ಪಿ ಕುಸಿದು ಬಿದ್ದಿದ್ದಳು. ತಕ್ಷಣವೇ ಶಾಲಾ ಸಿಬ್ಬಂದಿ ಆಕೆಯನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲಕ್ಕೆ ರವಾನಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

















































































error: Content is protected !!
Scroll to Top